ಸೋಮವಾರ, ಸೆಪ್ಟೆಂಬರ್ 20, 2021
28 °C

ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ನಾಯಕ ಸೇರಿ ಐವರ ಬಂಧನ

ಪ್ರಜಾವಾಣಿ ವೆಬ್‌‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಜಂತರ್‌ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಮತ್ತು ಇತರ ಐವರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ವಿನೋದ್‌ ಶರ್ಮಾ, ದೀಪಕ್‌ ಸಿಂಗ್‌, ವಿನೀತ್‌ ಕ್ರಾಂತಿ, ಪ್ರೀತ್‌ ಸಿಂಗ್‌ ಹಾಗೂ ದೀಪಕ್‌ ಉಳಿದ ಐವರು ಬಂಧಿತರು.

ʼಭಾನುವಾರ (ಆಗಸ್ಟ್ 8) ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಶ್ವಿನಿ ಉಪಾಧ್ಯಾಯ ಮತ್ತು ಇತರರನ್ನು ಬಂಧಿಸಲಾಗುವುದು. ದೆಹಲಿ ಪೊಲೀಸರು ಪ್ರಕರಣವನ್ನು ಕಾನೂನು ರೀತಿಯಲ್ಲಿ ನಿಭಾಯಿಸುತ್ತಿದ್ದಾರೆ. ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲʼ ಎಂದು ಪೊಲೀಸರು ಸೋಮವಾರ ಹೇಳಿದ್ದರು.

ಜಂತರ್‌ ಮಂತರ್‌ ಪ್ರತಿಭಟನೆ ವೇಳೆ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಅದರ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಭಾರತ್ ಚೋಡೊ‌ ಅಭಿಯಾನದ ಭಾಗವಾಗಿ ಜಂತರ್‌ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು.

ಬಿಜೆಪಿಯ ಮಾಜಿ ವಕ್ತಾರ ಮತ್ತು ವಕೀಲ ಅಶ್ವಿನಿ ಉಪಾಧ್ಯಾಯ ಅವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಭಾರತ ಜೋಡೋ ಆಂದೋಲನದ ವಕ್ತಾರ ಶಿಪ್ರಾ ಶ್ರೀವಸ್ತವ ತಿಳಿಸಿದ್ದರು.

ʼಜನರು ಅನುಮತಿ ಇಲ್ಲದೆ ಜಂತರ್‌ ಮಂತರ್‌ನಲ್ಲಿ ಸೇರಿದ್ದರು. ಅದೇರೀತಿ ಕೆಲವರು ಪ್ರಚೋದನಾಕಾರಿ ಮತ್ತು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿರುವುದು ನಮ್ಮ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೊ ಕೂಡ ನಮಗೆ ತಲುಪಿದ್ದು, ಎಫ್‌ಐಆರ್‌ ದಾಖಲಿಸಿಕೊಂಡಿದ್ದೇವೆʼ ಎಂದು ದೆಹಲಿ ಡಿಸಿಬಿ ದೀಪಕ್‌ ಯಾದವ್‌ ಹೇಳಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು