ಸೋಮವಾರ, ಜುಲೈ 4, 2022
22 °C

ಕ್ಷಿಪಣಿ ಪರೀಕ್ಷೆ ಯಶಸ್ವಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತೀಯ ನೌಕಾಪಡೆ ದೇಶೀಯವಾಗಿ ಅಭಿವೃದ್ಧಿಪಡಿಸಿರುವ ನೌಕೆ ನಿರೋಧಕ ಕ್ಷಿಪಣಿಯನ್ನು (ಎಎಸ್‌ಎಚ್‌ಎಂ) ಐಎನ್‌ಎಸ್‌ ಕೋರಾ ನೌಕೆಯಿಂದ ಶುಕ್ರವಾರ ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಕ್ಷಿಪಣಿ ಯುದ್ಧನೌಕೆಯೊಂದರ ಮೇಲೆ ನಿಖರವಾಗಿ ದಾಳಿ ನಡೆಸಿ, ಅದನ್ನು ಧ್ವಂಸ ಮಾಡಿದೆ.  

ಕುಶಲ ತಂತ್ರಜ್ಞಾನ ಹೊಂದಿರುವ, ನಿಖರತೆಯೊಂದಿಗೆ ಗುರಿ ಸಾಧಿಸುವಂತಹ ಈ ಕ್ಷಿಪಣಿ ಐಎನ್‌ಎಸ್‌ ಪ್ರಬಲ್‌ ನೌಕೆಯಿಂದ ಗುರಿಯತ್ತ ಚಿಮ್ಮಿದ ದೃಶ್ಯಗಳನ್ನು ಭಾರತೀಯ ನೌಕಾಪಡೆ ಅಕ್ಟೋಬರ್‌ 23ರಂದು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು