ಶುಕ್ರವಾರ, ಮೇ 20, 2022
19 °C

ಆಂಟಿಲಿಯಾ ಪ್ರಕರಣ: ನರೇಶ್ ಗೌರ್ ಜಾಮೀನು ತಡೆ ಆದೇಶ ರದ್ದುಪಡಿಸಿದ ಹೈಕೋರ್ಟ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ಅವರ ನಿವಾಸ ‘ಆಂಟಿಲಿಯಾ’ ಬಳಿಯ ಸ್ಫೋಟಕ ಪತ್ತೆ ಪ್ರಕರಣದಲ್ಲಿನ ಆರೋಪಿ ಕ್ರಿಕೆಟ್ ಬುಕ್ಕಿ ನರೇಶ್ ಗೌರ್ ಅವರ ಜಾಮೀನಿಗೆ ತಡೆಯಾಜ್ಞೆ ನೀಡಿದ್ದ ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶವನ್ನು ಬಾಂಬೆ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. 

ತಮಗೆ ನೀಡಿರುವ ಜಾಮೀನಿಗೆ 25 ದಿನಗಳ ಕಾಲ ತಡೆ ನೀಡಿರುವ ವಿಶೇಷ ಎನ್‌ಐಎ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಗೌರ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್.ಕೆ. ಶಿಂಧೆ ಅವರಿದ್ದ ಏಕಪೀಠವು ವಿಚಾರಣೆ ನಡೆಸಿ, ‘ತಮ್ಮ ಆದೇಶವನ್ನು ತಡೆಹಿಡಿಯುವ ಅಧಿಕಾರವನ್ನು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಹೊಂದಿಲ್ಲ’ ಎಂದು ತಿಳಿಸಿದೆ.

‘ನ್ಯಾಯಾಲಯದ ಪ್ರಕ್ರಿಯೆಯ ದುರುಪಯೋಗವನ್ನು ತಡೆಯಲು ಅಗತ್ಯವಿರುವಲ್ಲಿ ಜಾಮೀನು ಆದೇಶದ ಕಾರ್ಯಾಚರಣೆಯನ್ನು ಹೈಕೋರ್ಟ್ ಮಾತ್ರ ತಡೆಯಬಹುದು’ ಎಂದೂ ನ್ಯಾಯಮೂರ್ತಿ ಶಿಂಧೆ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು