ಮೋದಿ ಜನರನ್ನು ತಲುಪಿದ ಖಾತೆ ಇದು: ವಾರ್ತಾ ಇಲಾಖೆ ವಹಿಸಿಕೊಂಡ ಠಾಕೂರ್ ಹೇಳಿಕೆ

ನವದೆಹಲಿ: ಹಿಮಾಚಲ ಪ್ರದೇಶದ ಹಮಿರ್‌ಪುರ ಕ್ಷೇತ್ರದ ಲೋಕಸಭಾ ಸದಸ್ಯರಾಗಿರುವ ಅನುರಾಗ್ ಠಾಕೂರ್ ಅವರು ಗುರುವಾರ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಏಳು ವರ್ಷಗಳಲ್ಲಿ ಪ್ರಧಾನಿಯವರು ಈ ಇಲಾಖೆ ಮೂಲಕ ದೇಶದ ಮೂಲೆ ಮೂಲೆಯಲ್ಲಿರುವ ಜನರನ್ನು ತಲುಪುವ ಮೂಲಕ, ಅತ್ಯುತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರ ಕಾರ್ಯವನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತೇನೆ‘ ಎಂದು ತಿಳಿಸಿದರು.
ಈ ಸಚಿವಾಲಯದ ಮೂಲಕ ದೇಶದಾದ್ಯಂತವಿರುವ ನಾಗರಿಕರನ್ನು ತಲುಪುವ ಪ್ರಯತ್ನ ಮಾಡುತ್ತೇನೆ. ಪ್ರಧಾನಿಯವರು ನನ್ನ ಮೇಲೆ ವಿಶ್ವಾಸವಿಟ್ಟು ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ‘ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.