ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಮೇಲೆ ಕೆಟ್ಟದೃಷ್ಟಿ ಬೀರುವವರಿಗೆ ತಕ್ಕ ಉತ್ತರ: ರಾಜನಾಥ್‌ ಸಿಂಗ್‌

Last Updated 13 ನವೆಂಬರ್ 2022, 14:38 IST
ಅಕ್ಷರ ಗಾತ್ರ

ಚಂಡೀಗಡ : ‘ಭಾರತದ ಮೇಲೆ ಕೆಟ್ಟದೃಷ್ಟಿ ಬೀರುವವರಿಗೆ ಈಗ ತಕ್ಕ ಉತ್ತರ ನೀಡಲಾಗುತ್ತಿದೆ. ರಾಷ್ಟ್ರೀಯ ಹಿತಾಸಕ್ತಿಯ ರಕ್ಷಣೆಯು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮುಖ್ಯ ಗುರಿಯಾಗಿದೆ’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ.

ಹರಿಯಾಣದ ಜಜ್ಜರ್‌ನಲ್ಲಿ ನಿರ್ಮಾಣಗೊಂಡಿರುವ ರಾಜ ಪೃಥ್ವಿರಾಜ್‌ ಚೌಹಾಣ್‌ ಪ್ರತಿಮೆಯನ್ನು ಭಾನುವಾರ ಲೋಕಾಪರ್ಣೆಗೊಳಿಸಿ ಅವರು ಮಾತನಾಡಿದರು.

‘ಭಾರತವು ಈಗ ದುರ್ಬಲವಾಗಿ ಉಳಿದಿಲ್ಲ. ನಾವು ಶಾಂತಿಯಲ್ಲಿ ನಂಬಿಕೆ ಇರಿಸಿದವರು. ಆದರೆ, ನಮಗೆ ಹಾನಿಯುಂಟು ಮಾಡುವ ಪ್ರಯತ್ನ ಮಾಡಿದವರಿಗೆ ತಕ್ಕ ಉತ್ತರ ನೀಡಲಾಗುತ್ತಿದೆ. ಇದನ್ನು ನಮ್ಮ ಸೈನಿಕರು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ’ ಎಂದರು.

‘ಬ್ರಿಟಿಷರ ಕಾಲದ ಮನಃಸ್ಥಿತಿಯಿಂದ ಹೊರಬರುವ ಉದ್ದೇಶದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಛತ್ರಪತಿ ಶಿವಾಜಿಯಿಂದ ಸ್ಫೂರ್ತಿ ಪಡೆದುಕೊಂಡು ಭಾರತೀಯ ನೌಕಾಪಡೆಯ ಧ್ವಜವನ್ನು ಬದಲು ಮಾಡಲಾಗಿದೆ. ಸುಮಾರು ಸಾವಿರಕ್ಕೂ ಹೆಚ್ಚು ಬ್ರಿಟಿಷರ ಕಾಲದ ಕಾನೂನುಗಳನ್ನು ರದ್ದು ಪಡಿಸಲಾಗಿದೆ. ಜೊತೆಗೆ, ರಾಜಪಥವನ್ನು ಕರ್ತವ್ಯಪಥ ಎಂದು ಮರುನಾಮಕರಣ ಮಾಡಲಾಗಿದೆ. ಇಂಡಿಯಾ ಗೇಟ್‌ನಲ್ಲಿ ನೇತಾಜಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT