ಭಾನುವಾರ, ಜೂನ್ 13, 2021
29 °C
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್‌ ರೆಡ್ಡಿ ಘೋಷಣೆ

ತಿರುಪತಿ: ಮೃತ ಕೋವಿಡ್‌ ರೋಗಿಗಳ ಕುಟುಂಬಕ್ಕೆ ₹10 ಲಕ್ಷ ಪರಿಹಾರ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಅಮರಾವತಿ (ಪಿಟಿಐ‌): ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಮೃತಪಟ್ಟಿರುವ 11 ಜನ ಕೋವಿಡ್‌ ರೋಗಿಗಳ ಕುಟುಂಬಗಳಿಗೆ ತಲಾ ₹ 10 ಲಕ್ಷ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌.ಜಗನ್ ಮೋಹನ್‌ ರೆಡ್ಡಿ ಮಂಗಳವಾರ ಘೋಷಿಸಿದರು.

ರಾಜ್ಯದಲ್ಲಿನ ಕೋವಿಡ್‌ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಕಾನ್ಫರೆನ್ಸ್‌ ವೇಳೆ ಅವರು ಘೋಷಣೆ ಮಾಡಿದರು.

ನೌಕಾಪಡೆಯ ಪೂರ್ವ ಕಮಾಂಡ್‌ನ ಎಂಜಿನಿಯರ್‌ಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ, ಆಮ್ಲಜನಕ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿ, ಕೆಲವು ಮಾರ್ಪಾಡುಗಳಿಗೆ ಸಲಹೆ ನೀಡಿದೆ ಎಂದು ಮೂಲಗಳು ಹೇಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು