ಮಂಗಳವಾರ, ಸೆಪ್ಟೆಂಬರ್ 21, 2021
21 °C

ಟಿಟಿಡಿ ಮಂಡಳಿಯ ಅಧ್ಯಕ್ಷರಾಗಿ ವೈ.ವಿ ಸುಬ್ಬಾರೆಡ್ಡಿ ಮರುನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರ ಸಂಬಂಧಿ ವೈ. ವಿ ಸುಬ್ಬಾರೆಡ್ಡಿ ಅವರನ್ನು ತಿರುಪತಿ ತಿರುಮಲ ದೇಗುಲದ ಆಡಳಿತ ಮಂಡಳಿಯ(ಟಿಟಿಡಿ) ಅಧ್ಯಕ್ಷರಾಗಿ ಭಾನುವಾರ ಮರು ನೇಮಕ ಮಾಡಲಾಗಿದೆ.

ಈ ಸಂಬಂಧ ಪ್ರಧಾನ ಕಾರ್ಯದರ್ಶಿ (ಕಂದಾಯ-ದತ್ತಿಗಳು) ಜಿ. ವಾಣಿ ಮೋಹನ್ ಅವರು ಆದೇಶ ಹೊರಡಿಸಿದ್ದಾರೆ. ಮಂಡಳಿಯ ಇತರ ಸದಸ್ಯರನ್ನು ಆದಷ್ಟು ಬೇಗ ಆಯ್ಕೆ ಮಾಡಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.

ಮಾಜಿ ಸಂಸದ ಸುಬ್ಬಾ ರೆಡ್ಡಿ ಅವರು ಈ ವರ್ಷ ಜೂನ್‌ಗೆ ಕೊನೆಗೊಂಡಂತೆ ಎರಡು ವರ್ಷಗಳ ಅವಧಿಗೆ ಟಿಟಿಡಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಸುಬ್ಬಾರೆಡ್ಡಿ ಅವರನ್ನು ಆಂಧ್ರಪ್ರದೇಶದ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗುವುದು ಎಂಬ ಮಾತುಗಳು ಕೇಳಿ ಬಂದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು