ಮಂಗಳವಾರ, ಮಾರ್ಚ್ 28, 2023
31 °C
ಮಾ. 23ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ

‘ಅಮರಾವತಿ ಭೂಹಗರಣ’: ಚಂದ್ರಬಾಬು ನಾಯ್ಡುಗೆ ಸಿಐಡಿ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಮರಾವತಿ: ‘ಅಮರಾವತಿ ಭೂಹಗರಣ’ಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ಪೊಲೀಸರು ಮಂಗಳವಾರ ನೋಟಿಸ್‌ ಜಾರಿ ಮಾಡಿದ್ದಾರೆ.

‘ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ. ವಿಜಯವಾಡದಲ್ಲಿರುವ ಸಿಐಡಿ ಪ್ರಾದೇಶಿಕ ಕಚೇರಿಯಲ್ಲಿ ಮಾರ್ಚ್‌ 23ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗಬೇಕು’ ಎಂದು ತನಿಖಾಧಿಕಾರಿ ಲಕ್ಷ್ಮೀನಾರಾಯಣರಾವ್‌ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

‘ಕ್ಷುಲ್ಲಕ ಕಾರಣಕ್ಕಾಗಿ ಚಂದ್ರಬಾಬು ನಾಯ್ಡು ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ತೆಲುಗು ದೇಶಂ ಪಾರ್ಟಿ ಪ್ರತಿಕ್ರಿಯಿಸಿದೆ.

ವೈಎಸ್‌ಆರ್‌ ಕಾಂಗ್ರೆಸ್‌ ಶಾಸಕರಾದ ಅಲ್ಲ ರಾಮಕೃಷ್ಣ ರೆಡ್ಡಿ ನೀಡಿರುವ ದೂರಿನನ್ವಯ ಮಾರ್ಚ್‌ 12ರಂದು ಈ ಎಫ್‌ಐಆರ್‌ ದಾಖಲಿಸಲಾಗಿದೆ. ಟಿಡಿಪಿಯ ಮತ್ತೊಬ್ಬ ಮುಖಂಡ ಹಾಗೂ ಮಾಜಿ ಸಚಿವ ಪಿ.ನಾರಾಯಣ ಅವರ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಅಮರಾವತಿ ನಗರವನ್ನು ಆಂಧ್ರಪ್ರದೇಶದ ನೂತನ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸುವ ಸಂಬಂಧ 2015ರಲ್ಲಿ ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬುದು ಆರೋಪ.

ಈ ಆರೋಪದಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿತ್ತು. ಆದರೆ, ಈಗ ಆರು ವರ್ಷಗಳ ನಂತರ ಈ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿ, ವಿಚಾರಣೆ ಆರಂಭಿಸಿರುವುದು ಚರ್ಚೆಗೆ ಕಾರಣವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು