ಶನಿವಾರ, ಏಪ್ರಿಲ್ 17, 2021
27 °C
ಕಾಂಗ್ರೆಸ್‌ ದೂಳಿಪಟ, ಟಿಡಿಪಿ, ಬಿಜೆಪಿಗೂ ಹಿನ್ನಡೆ

ಆಂಧ್ರ ಪ್ರದೇಶ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಜಯಭೇರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಮರಾವತಿ: ಆಂಧ್ರಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಜಯಭೇರಿ ಬಾರಿಸಿದೆ.

ಪ್ರಮುಖ ವಿರೋಧ ಪಕ್ಷವಾದ ತೆಲುಗು ದೇಶಂ ಪಕ್ಷ ಕೇವಲ ಐದು ಸ್ಥಳೀಯ ಸಂಸ್ಥೆಗಳಲ್ಲಿ ಮಾತ್ರ ಎರಡಂಕಿ ದಾಟಿದೆ. ಬಿಜೆಪಿ ಮತ್ತು ಜನ ಸೇನಾ ಪಕ್ಷ ಅಲ್ಪಮಟ್ಟಿಗೆ ಗೆಲುವು ಸಾಧಿಸಿವೆ. ಕಾಂಗ್ರೆಸ್‌ ಹೀನಾಯ ಸೋಲು ಅನುಭವಿಸಿದೆ.

12 ಮಹಾನಗರ ಪಾಲಿಕೆಗಳಲ್ಲಿ 11ರಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಅಧಿಕಾರ ಪಡೆದುಕೊಂಡಿದೆ. ಹೈಕೋರ್ಟ್‌ ಆದೇಶದ ಕಾರಣ ಎಲೂರು ಮಹಾನಗರ ಪಾಲಿಕೆಯ ಮತ ಎಣಿಕೆ ಕೈಗೊಂಡಿಲ್ಲ.

 75 ಮುನ್ಸಿಪಾಲಿಟಿಗಳ 2,122 ವಾರ್ಡ್‌ಗಳಲ್ಲಿ 1,754 ವಾರ್ಡ್‌ಗಳಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಟಿಡಿಪಿ 270 ಸ್ಥಾನಗಳಲ್ಲಿ ಜಯಗಳಿಸಿದೆ. ಬಿಜೆಪಿ 8, ಜನ ಸೇನಾ ಪಕ್ಷ 19, ಇತರ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರರು 71 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

‘ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರ ನಾಯಕತ್ವದಲ್ಲಿ ಜನರು ವಿಶ್ವಾಸವಿಟ್ಟು ಮತ ಹಾಕಿದ್ದಾರೆ. ಕಳೆದ 22 ತಿಂಗಳಲ್ಲಿ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ. ಹೀಗಾಗಿ, ಮತದಾರರು ಬೆಂಬಲಿಸಿದ್ದಾರೆ’ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಪ್ರಕಟಣೆ ತಿಳಿಸಿದೆ.

‘ಮೂರು ರಾಜಧಾನಿಗಳನ್ನು ಸ್ಥಾಪಿಸುವ ಸರ್ಕಾರದ ನಿರ್ಧಾರಕ್ಕೂ ಜನರು ಮತದಾನದ ಮೂಲಕ ಬೆಂಬಲಿಸಿದ್ದಾರೆ’ ಎಂದು ಅದು ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು