ಬುಧವಾರ, ಫೆಬ್ರವರಿ 1, 2023
18 °C

ಭಾರತ್ ಜೋಡೊ ಯಾತ್ರೆ: ರಾಹುಲ್ ಗಾಂಧಿ ಶ್ಲಾಘಿಸಿದ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ

ಪಿಟಿಐ Updated:

ಅಕ್ಷರ ಗಾತ್ರ : | |

ಅಯೋಧ್ಯೆ: ಭಾರತ್ ಜೋಡೊ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ.

ರಾಹುಲ್ ಭಾರತ್ ಜೋಡೊ ಯಾತ್ರೆ ಕೈಗೊಂಡಿರುವುದಲ್ಲಿ ಯಾವುದೇ ತಪ್ಪಿಲ್ಲ. ಕಾಲ್ನಡಿಗೆ ಯಾತ್ರೆ ನಡೆಸುತ್ತಿರುವ ರಾಹುಲ್‌ರನ್ನು ಅಭಿನಂದಿಸುವುದಾಗಿ ತಿಳಿಸಿದರು.

ನಾನು ಆರ್‌ಎಸ್‌ಎಸ್ ಕಾರ್ಯಕರ್ತ. ಆದರೆ ಭಾರತ್ ಜೋಡೊ ಯಾತ್ರೆಯನ್ನು ಎಂದಿಗೂ ಖಂಡಿಸಿಲ್ಲ ಎಂದು ಅವರು ತಿಳಿಸಿದರು.

ಈ ವಿಪರೀತ ಹವಾಮಾನ ಪರಿಸ್ಥಿತಿಯಲ್ಲೂ ಯಾತ್ರೆ ನಡೆಸುತ್ತಿರುವ ರಾಹುಲ್ ಅವರನ್ನು ಮೆಚ್ಚಬೇಕು. ಪ್ರತಿಯೊಬ್ಬರೂ ದೇಶದ ಯಾತ್ರೆ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಈ ಮೊದಲು ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಭಾರತ್ ಜೋಡೊ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ಅವರನ್ನು ಆಶೀರ್ವದಿಸುವುದಾಗಿ ಪತ್ರ ಬರೆದಿದ್ದರು.

ರಾಮಮಂದಿರ ಟ್ರಸ್ಟ್‌ನ ಮತ್ತೊಬ್ಬ ಟ್ರಸ್ಟಿ ಗೋವಿಂದ ದೇವಗಿರಿ ಕೂಡ ಭಾರತ್ ಜೋಡೊ ಯಾತ್ರೆಯನ್ನು ಶ್ಲಾಘಿಸಿದ್ದಾರೆ. ದೇಶವು ಐಕ್ಯತೆ, ಬಲಿಷ್ಠ ಮತ್ತು ಸೌಹಾರ್ದಯುತವಾಗಿ ಉಳಿಯಲು ರಾಹುಲ್‌ರನ್ನು ಶ್ರೀರಾಮ ದೇವರು ಆಶೀರ್ವದಿಸಬೇಕು ಎಂದು ಪ್ರಾರ್ಥಿಸುತ್ತೇನೆ. ಭಾರತ್ ಜೋಡೊ ಯಾತ್ರೆಯು ದೇಶವನ್ನು ಒಗ್ಗೂಡಿಸಬೇಕು ಎಂದು ಆಶಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು