ಲಸಿಕೆಗೆ ಅನುಮೋದನೆ: ಕೋವಿಡ್ ವಿರುದ್ಧದ ಹೋರಾಟದಲ್ಲಿ ನಿರ್ಣಾಯಕ ತಿರುವು –ಮೋದಿ

ನವದೆಹಲಿ: ‘ಕೊರೊನಾ ವಿರುದ್ದ ಚಿಕಿತ್ಸೆಗಾಗಿ ಎರಡು ಲಸಿಕೆಗಳಿಗೆ ಅನುಮೋದನೆ ನೀಡಿರುವುದು, ಈ ಸೋಂಕಿನ ವಿರುದ್ದದ ಹೋರಾಟದಲ್ಲಿ ನಿರ್ಣಾಯಕ ತಿರುವು’ ಎಂದು ಪ್ರದಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಲಸಿಕೆಗಳಿಗೆ ಅನುಮೋದನೆ ನೀಡಿರುವುದು ದೇಶವನ್ನು ಕೋವಿಡ್–19 ಮುಕ್ತವಾಗಿಸುವ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಆಕ್ಸ್‌ಫರ್ಡ್ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಬಳಕೆಗೆ ಡಿಸಿಜಿಐ ಸಮ್ಮತಿ ಕುರಿತು ಸರಣಿ ಟ್ವೀಟ್‌ನಲ್ಲಿ ಅವರು, ‘ಎರಡು ಲಸಿಕೆ ಲಭ್ಯವಾಗಿರುವುದು ಹೆಮ್ಮೆಯ ವಿಷಯ’ ಎಂದಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.