ಶುಕ್ರವಾರ, ಏಪ್ರಿಲ್ 23, 2021
27 °C

ಬಂಗಾಳದಲ್ಲಿ 8 ಹಂತದ ಚುನಾವಣೆ; ಮೋದಿ, ಅಮಿತ್ ಶಾ ವಿರುದ್ಧ ಮಮತಾ ಕಿಡಿ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗವು ಶುಕ್ರವಾರದಂದು ಪ್ರಕಟಿಸಿದೆ. ಆದರೆ ಬಂಗಾಳದಲ್ಲಿ ಮಾತ್ರ ಎಂಟು ಹಂತಗಳಲ್ಲಿ ಮತದಾನ ನಿಗದಿಪಡಿಸಲಾಗಿದೆ.

ಈ ಕುರಿತು ಅಚ್ಚರಿ ಹಾಗೂ ಅಸಮಾಧಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಚುನಾವಣಾ ಪ್ರಚಾರದ ಉತ್ತಮ ನಿರ್ವಹಣೆಗಾಗಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಸಲಹೆಯಂತೆ ಕೇಂದ್ರ ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ಪ್ರಕಟಿಸಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗವು ಚುನಾವಣೆ ದಿನಾಂಕವನ್ನು ಪ್ರಕಟಿಸುತ್ತಿದ್ದಂತೆಯೇ ಕಾಳಿಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಮತಾ, ಕೇಸರಿ ಪಕ್ಷದ ದೃಷ್ಟಿಕೋನದಿಂದ ಚುನಾವಣಾ ಆಯೋಗವು ಪಶ್ಚಿಮ ಬಂಗಾಳವನ್ನು ನೋಡಬಾರದು ಎಂದು ಹೇಳಿದರು.

ಚುನಾವಣಾ ಆಯೋಗಕ್ಕೆ ಎಲ್ಲ ರೀತಿಯ ಗೌರವವನ್ನು ಸಲ್ಲಿಸುತ್ತಾ ಹೇಳ ಬಯಸುವುದೇನೆಂದರೆ, ದೇಶದ ಇತರೆ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಬಂಗಾಳದಲ್ಲಿ ಮಾತ್ರ ಹಲವು ಹಂತಗಳಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವುದು ಪ್ರಶ್ನಾರ್ಥಕವಾಗಿದೆ. ಚುನಾವಣಾ ಆಯೋಗವೇ ನ್ಯಾಯವನ್ನು ಒದಗಿಸದಿದ್ದರೆ ಜನರು ಇನ್ನೆಲ್ಲಿಗೆ ಹೋಗುತ್ತಾರೆ ಎಂದು ಕೇಳಿದರು.

ಇದನ್ನೂ ಓದಿ: 

ಬಿಜೆಪಿಯ ಈ ಎಲ್ಲ ಕುತಂತ್ರಗಳ ಹೊರತಾಗಿಯೂ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೇರಲಿದೆ ಎಂದು ಮಮತಾ ಬ್ಯಾನರ್ಜಿ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ನನ್ನ ಮೂಲಗಳ ಪ್ರಕಾರ ಬಿಜೆಪಿ ಬಯಸಿದಂತೆ ಚುನಾವಣಾ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಲಹೆಯಂತೆ ದಿನಾಂಕಗಳನ್ನು ಘೋಷಿಸಲಾಗಿದೆಯೇ? ರಾಜ್ಯ ಚುನಾವಣೆಯಲ್ಲಿ ಪ್ರಧಾನಿ ಹಾಗೂ ಗೃಹ ಸಚಿವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಹೇಳಿದರು.

ಬಂಗಾಳದ ಮಗಳಾಗಿ ಬಿಜೆಪಿಗಿಂತಲೂ ಚೆನ್ನಾಗಿ ರಾಜ್ಯವನ್ನು ಬಲ್ಲೆನು. ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು