ಶುಕ್ರವಾರ, ಮಾರ್ಚ್ 31, 2023
23 °C

ವ್ಯಭಿಚಾರ: ಅಧಿಕಾರಿ ವಿರುದ್ಧ ಸಶಸ್ತ್ರ ‍ಪಡೆಗಳು ಕ್ರಮ ಕೈಗೊಳ್ಳಬಹುದು ಸುಪ್ರೀಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ವ್ಯಭಿಚಾರದಂತಹ ಕೃತ್ಯಗಳಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಸಶಸ್ತ್ರ ಪಡೆಗಳು ಕ್ರಮ ಕೈಗೊಳ್ಳಬಹುದು’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಹೇಳಿದೆ.

2018ರ ಸೆಪ್ಟೆಂಬರ್‌ನಲ್ಲಿ ಜೋಸೆಫ್‌ ಶೈನ್‌ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆ ನಡೆಸಿದ್ದ ನ್ಯಾಯಾಲಯವು ವ್ಯಭಿಚಾರವನ್ನು ಅ‍ಪರಾಧ ವ್ಯಾಖ್ಯೆಯಿಂದ ಹೊರಗಿಟ್ಟು ತೀರ್ಪು ಪ್ರಕಟಿಸಿತ್ತು. ಐಪಿಸಿ ಸೆಕ್ಷನ್‌ 497ನ್ನೂ ರದ್ದುಪಡಿಸಿತ್ತು. 

ಕೇಂದ್ರ ಸರ್ಕಾರದ ಪರವಾಗಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಮಾಧವಿ ದಿವಾನ್‌ ಅವರು ಸುಪ್ರೀಂ ಕೋರ್ಟ್‌ನ ಈ ತೀರ್ಪಿನ ಕುರಿತು ಸ್ಪಷ್ಟನೆ ನೀಡುವಂತೆ ನ್ಯಾಯಮೂರ್ತಿ ಕೆ.ಎಂ.ಜೋಸೆಫ್‌ ನೇತೃತ್ವದ ಐವರು ಸದಸ್ಯರನ್ನೊಳಗೊಂಡ ಸಾಂವಿಧಾನಿಕ ನ್ಯಾಯಪೀಠಕ್ಕೆ ಮನವಿ ಮಾಡಿದರು. 

‘2018ರ ತೀರ್ಪು ಸಶಸ್ತ್ರ ಪಡೆಗಳ ಕಾಯ್ದೆಯ ನಿಬಂಧನೆಗಳಿಗೆ ಸಂಬಂಧಿಸಿಲ್ಲ’ ಎಂದು ನ್ಯಾಯಮೂರ್ತಿಗಳಾದ ಅಜಯ್‌ ರಸ್ತೋಗಿ, ಅನಿರುದ್ಧ ಬೋಸ್‌, ಹೃಷಿಕೇಶ್‌ ರಾಯ್‌ ಮತ್ತು ಸಿ.ಟಿ.ರವಿಕುಮಾರ್‌ ಅವರನ್ನೊಳಗೊಂಡ ನ್ಯಾಯಪೀಠವು ತಿಳಿಸಿತು.

‘ವ್ಯಭಿಚಾರದಂತಹ ಕೃತ್ಯಗಳಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ 2018ರ ತೀರ್ಪು ತೊಡಕಾಗಿದೆ. ಹೀಗಾಗಿ ಈ ತೀರ್ಪಿನಿಂದ ಸಶಸ್ತ್ರ ಪಡೆಗಳಿಗೆ ವಿನಾಯಿತಿ ನೀಡಬೇಕು’ ಎಂದು ಕೇಂದ್ರ ರಕ್ಷಣಾ ಸಚಿವಾಲಯವು ತನ್ನ ಅರ್ಜಿಯಲ್ಲಿ ಕೋರಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು