ಬುಧವಾರ, ಅಕ್ಟೋಬರ್ 28, 2020
20 °C
ರಾಜ್ಯಸಭೆಗೆ ರಕ್ಷಣಾ ಖಾತೆ ರಾಜ್ಯ ಸಚಿವ ಮಾಹಿತಿ

ಕೊರೊನಾ ಸೋಂಕಿನಿಂದ 41 ಯೋಧರು ಸಾವು: ರಕ್ಷಣಾ ಖಾತೆ ರಾಜ್ಯ ಸಚಿವ ಮಾಹಿತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗದಿಂದ 41 ಮಂದಿ ಯೋಧರು ಸಾವಿಗೀಡಾಗಿದ್ದು, ಸೋಂಕಿತರ ಸಂಖ್ಯೆ ಇಪ್ಪತ್ತು ಸಾವಿರ ದಾಟಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.

ಇಲ್ಲಿವರೆಗೆ ಕೊರೋನಾ ಸೋಂಕಿನಿಂದಾಗಿ ಮೃತಪಟ್ಟ ಯೋಧರ ಸಂಖ್ಯೆ 41 ಮತ್ತು ಸೋಂಕು ದೃಢಪಟ್ಟವರ ಸಂಖ್ಯೆ 22,353 ಆಗಿದೆ. ಸೇನಾಪಡೆಗಳಲ್ಲಿ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ಎಲ್ಲ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ರಕ್ಷಣಾ ಇಲಾಖೆ ರಾಜ್ಯ ಸಚಿವ ಶ್ರೀಪಾದ್ ‌ನಾಯಕ್ ಅವರು ತಿಳಿಸಿದ್ದಾರೆ.

‘ಕೋವಿಡ್‌ 19 ಚಿಕಿತ್ಸೆಗಾಗಿ ನಿಗದಿಪಡಿಸಿರುವ‌ ರಾಷ್ಟ್ರ ಮತ್ತು ಅಂತರರಾಷ್ಟ್ರೀಯಮಟ್ಟದ ಶಿಷ್ಟಾಚಾರದ ಪ್ರಕಾರವೇ ಸೇನಾ ಆಸ್ಪತ್ರೆಗಳಲ್ಲಿ ಸೋಂಕಿತ ಯೋಧರಿಗೆ ಆಂಟಿವೈರಲ್ ಔಷಧಗಳನ್ನು (ಫವಿಪಿರಾವಿರ್ ಮತ್ತು ರೆಮ್‌ಡೆಸಿವಿರ್‌) ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತೀವ್ರ ಅನಾರೋಗ್ಯ ಪೀಡಿತರಿಗೆ ಎರಡು ಸೇನಾ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.    

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು