ಬುಧವಾರ, ಡಿಸೆಂಬರ್ 8, 2021
27 °C

ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಲಡಾಖ್‌ಗೆ ಸೇನಾ ಮುಖ್ಯಸ್ಥ ನರವಣೆ ಭೇಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತ– ಚೀನಾ ಗಡಿ ಭಾಗದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅವರು ಪೂರ್ವ ಲಡಾಖ್‌ನ ಪಾಂಗಾಂಗ್‌ ತ್ಸೊ ಸರೋವರದ ದಕ್ಷಿಣ ಭಾಗಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ.

ಅವರು ಗುರುವಾರ ಲೇಹ್‌ಗೆ ತೆರಳಿದ್ದು, ಎರಡು ದಿನಗಳ ಕಾಲ ಪಾಂಗೋಂಗ್ ತ್ಸೊ ಸರೋವರದ ದಕ್ಷಿಣ ಭಾಗದಲ್ಲಿ ಸೇನಾ ನಿಯೋಜನೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲಿದ್ದಾರೆ ಎಂದು ಸೇನಾ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಭಾಗದಲ್ಲಿ ಯಥಾಸ್ಥಿತಿ ಬದಲಿಸಲು ಚೀನಾ ನಡೆಸಿದ ಪ್ರಯತ್ನಗಳನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ಪರಿಸ್ಥಿತಿಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸೇನೆಯ ನಿಯೋಜನೆ, ಭಾರತ ಯುದ್ಧಕ್ಕೆ ನಡೆಸಿರುವ ಸಿದ್ಧತೆ ಕುರಿತು ಜನರಲ್ ನರವಣೆಯವರಿಗೆ ಸೇನಾ ಅಧಿಕಾರಿಗಳು ವಿವರಣೆ ನೀಡಲಿದ್ದಾರೆ. 

ಪಾಂಗೊಂಗ್ ಸರೋವರದ ದಕ್ಷಿಣದ ದಂಡೆಯಲ್ಲಿ ಚೀನಾ ಕೆಲವು ಪ್ರದೇಶಗಳನ್ನು ಆಕ್ರಮಿಸಿಕೊಳ್ಳಲು ವಿಫಲವಾದ ನಂತರ ಆ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಯಿತು. ಭಾರತ, ಆ ಪ್ರದೇಶದಲ್ಲಿ ಹೆಚ್ಚುವರಿ ಶಸ್ತ್ರಸಜ್ಜಿತ ಯೋಧರನ್ನು ನಿಯೋಜಿಸಿತ್ತು. ಗಡಿಯಲ್ಲಿನ ಯಥಾಸ್ಥಿತಿ ಬದಲಿಸಲು ಚೀನಾ ಪಡೆಗಳು ಮತ್ತೆ ಅಪ್ರಚೋದಿತವಾಗಿ ಮುಂದಾಗಿದ್ದವು ಎಂದು ಭಾರತೀಯ ಸೇನೆ ಸೋಮವಾರ ಆರೋಪಿಸಿತ್ತು.   

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು