ಶನಿವಾರ, ಮಾರ್ಚ್ 25, 2023
29 °C
ಉಭಯ ರಾಷ್ಟ್ರಗಳ ನಡುವಿನ ರಕ್ಷಣಾ ಕ್ಷೇತ್ರದ ಬಲವರ್ಧನೆ ಕುರಿತು ಮಾತುಕತೆ

ರೋಮ್‌ನಲ್ಲಿ ಇಟಲಿಯ ರಕ್ಷಣಾ ಸಚಿವರನ್ನು ಭೇಟಿಯಾದ ಸೇನಾ ಮುಖ್ಯಸ್ಥ ನರವಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಎರಡು ದಿನಗಳ ಭೇಟಿಗಾಗಿ ಬ್ರಿಟನ್‌ ಮತ್ತು ಇಟಲಿ ಪ್ರವಾಸದಲ್ಲಿರುವ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರು ಗುರುವಾರ ರೋಮ್‌ನಲ್ಲಿ ಇಟಲಿಯ ರಕ್ಷಣಾ ಸಚಿವ ಲೊರೆಂಝೊ ಗುಯೆರಿನಿ ಹಾಗೂ ರಕ್ಷಣಾ ವಿಭಾಗದ ಮುಖ್ಯಸ್ಥ ಲೆ. ಜನರಲ್ ಪಿಯೆಟ್ರೊ ಸೆರಿನೊ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪ್ರವಾಸದ ಮೊದಲ ದಿನವಾದ ಬುಧವಾರದಂದು ರೋಮ್‌ಗೆ ಬಂದಿಳಿದ ಅವರು, ಇಟಲಿ ರಕ್ಷಣಾ ಇಲಾಖೆಯ ಮುಖ್ಯಸ್ಥರನ್ನು ಭೇಟಿಯಾಗಿ, ಉಭಯ ರಾಷ್ಟ್ರಗಳ ನಡುವಿನ ರಕ್ಷಣಾ ಕ್ಷೇತ್ರಗಳ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಪರಸ್ಪರ ಸಹಕಾರ ನೀಡುವ ಕುರಿತು ಸುಧೀರ್ಘವಾಗಿ ಚರ್ಚೆ ನಡೆಸಿದ್ದಾರೆ.

‘ಉಭಯ ರಾಷ್ಟ್ರಗಳ ನಡುವಿನ ರಕ್ಷಣಾ ಸಹಕಾರವನ್ನು ಬಲಪಡಿಸುವ ಕುರಿತು ಎರಡೂ ರಾಷ್ಟ್ರಗಳ ನಾಯಕರು ಪರಸ್ಪರ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರವಾಸದ ವೇಳೆ ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅವರು ಇಟಲಿ ನಗರದ ಕ್ಯಾಸ್ಸಿನೊದಲ್ಲಿ ನಿರ್ಮಿಸಲಾಗಿರುವ ಭಾರತೀಯ ಸೇನಾ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ವಿಶ್ವದ ಎರಡನೇ ಮಹಾ ಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಸೈನಿಕರ ಸ್ಮರಣಾರ್ಥ ಈ ಸ್ಮಾರಕವನ್ನು ನಿರ್ಮಿಸಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು