ಮಂಗಳವಾರ, ಅಕ್ಟೋಬರ್ 27, 2020
19 °C

ಗಡಿಯಲ್ಲಿ ಉದ್ವಿಗ್ವ ಸ್ಥಿತಿ ಶಮನ ಯತ್ನ: ಭಾರತ-ಚೀನಾ ನಡುವೆ 6ನೇ ಸುತ್ತಿನ ಚರ್ಚೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೂರ್ವ ಲಡಾಕ್ ನಲ್ಲಿ ಮೂಡಿರುವ ಉದ್ವಿಗ್ನ ಸ್ಥಿತಿಯನ್ನು ಶಮನಗೊಳಿಸುವ ಕ್ರಮವಾಗಿ ಸೇನೆಯನ್ನು ಹಿಂಪಡೆಯುವ ಸಂಬಂಧ ಆಗಿರುವ ಐದು ಅಂಶಗಳ ಒಪ್ಪಂದದ ಅನುಷ್ಠಾನ ಕುರಿತಂತೆ ಸೋಮವಾರ ಭಾರತ ಮತ್ತು ಚೀನಾದ ಸೇನೆಗಳ ಹಿರಿಯ ಕಮಾಂಡರ್ ಗಳ ನಡುವೆ ಆರನೇ ಸುತ್ತಿನ ಮಾತುಕತೆ ನಡೆಯಿತು.

ಮಾತುಕತೆಯು ಲಡಾಖ್ ನಲ್ಲಿ ವಾಸ್ತವ ಗಡಿರೇಖೆಗೆ ಹೊಂದಿಕೊಂಡಂತೆ ಇರುವ ಚೀನಾ ಭಾಗದ ಮೊಲ್ಡೊದಲ್ಲಿ ನಡೆಯಿತು.  ಭಾರತ ನಿಯೋಗದ ನೇತೃತ್ವವನ್ನು ಲೆಫ್ಟಿನಂಟ್ ಜನರಲ್ ಹರಿಂದರ್ ಸಿಂಗ್ ವಹಿಸಿದ್ದರು. ಚೀನಾದ ನಿಯೋಗದ ನೇತೃತ್ವವನ್ನು ದಕ್ಷಿಣ ಕ್ಸಿಜಿಯಾಂಗ್ ಮಿಲಿಟರಿ ವಲಯದ ಕಮಾಂಡರ್ ಮೇಜರ್ ಜನರಲ್ ಲಿಯು ಲಿನ್ ವಹಿಸಿದ್ದರು.

ಭಾರತದ ನಿಯೋಗದಲ್ಲಿ ವಿದೇಶಾಂಗ ಸಚಿವಾಲಯದ ಉನ್ನತ ಅಧಿಕಾರಿಗಳು, ಲೆಫ್ಟಿನಂಟ್ ಜನರಲ್ ಪಿಜಿಕೆ ಮೆನನ್ ಅವರೂ ಇದ್ದರು. ಉಭಯ ರಾಷ್ಟ್ರಗಳ ನಡುವಣ ಉನ್ನತ ಮಟ್ಟದ ಸೇನಾ ಹಂತದ ಚರ್ಚೆಯಲ್ಲಿ ಇದೇ ಮೊದಲ ಬಾರಿಗೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸೋಮವಾರ ಚರ್ಚೆಯ ಕಾರ್ಯಸೂಚಿಯಲ್ಲಿ ಉಭಯ ರಾಷ್ಟ್ರಗಳ ನಡುವೆ ಸೆಪ್ಟೆಂಬರ್ 10ರಂದು ಮಾಸ್ಕೊದಲ್ಲಿ ಆಗಿದ್ದ ಒಪ್ಪಂದದ ಜಾರಿಗೆ ನಿರ್ದಿಷ್ಟ ಕಾಲಮಿತಿ ನಿಗದಿಪಡಿಸುವುದೇ ಪ್ರಧಾನವಾಗಿತ್ತು. ಉಭಯ ರಾಷ್ಟ್ರಗಳ ನಡುವೆ ಗಡಿಯಲ್ಲಿ ಮೂಡಿರುವ ಉದ್ವಿಗ್ನ ಸ್ಥಿತಿಯನ್ನು ಶಮನಗೊಳಿಸುವ ನಿಟ್ಟಿನಲ್ಲಿ ಒಡಂಬಡಿಕೆಗೆ ಬರಲಾಗಿದೆ.

 ಈ ನಡುವೆ, ಸೇನೆಗೆ ಹೊಸದಾಗಿ ಸೇರ್ಪಡೆಯಾಗಿರುವ ರಫೇಲ್ ಜೆಟ್ ಗಳು ಪೂರ್ವ ಲಡಾಖ್ ಗೆ ಶಸ್ತ್ರಾಸ್ತ್ರಗಳನ್ನು ಒಯ್ಯುವ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇದು ಚೀನಾದ ಪ್ರಚೋದನೆ ಕ್ರಮಗಳ ಹಿನ್ನೆಲೆಯಲ್ಲಿ ಪ್ರತಿರೋಧಕ್ಕೆ ಸನ್ನದ್ಧವಾಗಿದ್ದೇವೆ ಎಂಬ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು ಇದರ ಉದ್ದೇಶ ಎಂದು ಹೇಳಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು