ಬುಧವಾರ, ಅಕ್ಟೋಬರ್ 28, 2020
23 °C

ಗಡಿ ಸಂಘರ್ಷ: ಚೀನಾ ಸೇನೆ ಜತೆ ಆರನೇ ಸುತ್ತಿನ ಮಾತುಕತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿಯ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತ ಸೇನೆ ಮತ್ತು ಚೀನಾ ಸೇನೆಯ ಕಮಾಂಡರ್ ಮಟ್ಟದ ಅಧಿಕಾರಿಗಳ ಮಧ್ಯೆ ಆರನೇ ಸುತ್ತಿನ ಮಾತುಕತೆ ಸೋಮವಾರ ನಡೆಯಿತು.

ಎಲ್‌ಎಸಿಯಿಂದ ಆಚೆ ಚೀನಾ ನೆಲದಲ್ಲಿ ಇರುವ ಮೊಲ್ಡೊದಲ್ಲಿ ಸಭೆ ನಡೆಯಿತು. ಬೆಳಿಗ್ಗೆ ಆರಂಭವಾದ ಸಭೆಯಲ್ಲಿ ಭಾರತದ ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ಅವರ ನೇತೃತ್ವದ ನಿಯೋಗವು ಭಾಗಿಯಾಗಿತ್ತು. ಈ ನಿಯೋಗದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ರ‍್ಯಾಂಕ್‌ನ ಅಧಿಕಾರಿಯೂ ಭಾಗವಹಿಸಿದ್ದರು.

ವಿದೇಶಾಂಗ ವ್ಯವಹಾರದ ಸಚಿವಾಲಯದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದು ಇದೇ ಮೊದಲು. ಸೆಪ್ಟೆಂಬರ್ 10ರಂದು ಮಾಸ್ಕೊದಲ್ಲಿ ನಡೆದ ಸಭೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಮತ್ತು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರು ಒಪ್ಪಂದ ಮಾಡಿಕೊಂಡಿದ್ದರು. ಎಲ್‌ಎಸಿಯಿಂದ ಸೈನಿಕರನ್ನು ವಾಪಸ್‌ ಕರೆಸಿಕೊಳ್ಳುವ ಸಂಬಂಧ ಮಾಡಿಕೊಂಡಿದ್ದ ಈ ಒಪ್ಪಂದವನ್ನು ಜಾರಿಗೆ ತರಲು ಕಾಲಮಿತಿ ಹಾಕಿಕೊಳ್ಳುವ ಬಗ್ಗೆ ಸೋಮವಾರದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು