ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26ರಿಂದ ಸೇನೆ ಕಮಾಂಡರ್‌ಗಳ ಸಮಾವೇಶ

Last Updated 19 ಅಕ್ಟೋಬರ್ 2020, 3:21 IST
ಅಕ್ಷರ ಗಾತ್ರ

ನವದೆಹಲಿ:ಸೇನೆಯ ಕಮಾಂಡರ್‌ಗಳ ಸಮಾವೇಶಅ.26ರಂದು ನಾಲ್ಕು ದಿನಗಳ ಕಾಲ ನಡೆಯಲಿದೆ. ಸೇನೆಯ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆ, ಕಾರ್ಯಾಚರಣೆ ಸಾಮರ್ಥ್ಯ ವೃದ್ಧಿ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಆಂತರಿಕ ಸಮಿತಿಗಳು ಮಾಡಿರುವ ಶಿಫಾರಸುಗಳ ಕುರಿತು ಈ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಸೇನೆಯ ಮುಖ್ಯಸ್ಥ ಜನರಲ್‌ ಎಂ.ಎಂ.ನರವಣೆ ಈ ಸಮಾವೇಶದ ಅಧ್ಯಕ್ಷತೆ ವಹಿಸುವರು. ‌

ಸೇನೆಯಲ್ಲಿ ಸುಧಾರಣೆ ತರುವ ಸಂಬಂಧ ಕಾಲಕಾಲಕ್ಕೆ ವಿವಿಧ ಸಮಿತಿಗಳು ಹಲವಾರು ಶಿಫಾರಸುಗಳನ್ನು ಮಾಡಿವೆ. ಸೇನೆಯ ಸಂಪನ್ಮೂಲಗಳನ್ನು ಸರಿಯಾಗಿ ಹಂಚಿಕೆಯಾಗುವಂತೆ ನೋಡಿಕೊಳ್ಳುವುದು, ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೆಚ್ಚಳಕ್ಕೆ ಮಾರ್ಗೋಪಾಯ ಕಂಡುಕೊಳ್ಳುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಈ ಸಮಾವೇಶದಲ್ಲಿ ಚರ್ಚಿಸಲಾಗುವುದು.

ಲಡಾಖ್‌ನ ಪೂರ್ವ ಗಡಿಯಲ್ಲಿ ಚೀನಾದೊಂದಿಗೆ ನಡೆಯುತ್ತಿರುವ ಸಂಘರ್ಷ ಕುರಿತಂತೆಯೂ ವಿಸ್ತೃತ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT