ಗುರುವಾರ , ಫೆಬ್ರವರಿ 25, 2021
28 °C

ಜಮ್ಮು–ಕಾಶ್ಮೀರದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ; ಪೈಲಟ್‌ಗಳಿಗೆ ಗಾಯ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಧ್ರುವ್‌ ಹೆಲಿಕಾಪ್ಟರ್‌–ಸಾಂದರ್ಭಿಕ ಚಿತ್ರ

ನವದೆಹಲಿ: ಭಾರತೀಯ ಸೇನೆಯ ಸುಧಾರಿತ ಹಗುರ ಹೆಲಿಕಾಪ್ಟರ್‌ 'ಧ್ರುವ್‌' ಸೋಮವಾರ ಜಮ್ಮು ಮತ್ತು ಕಾಶ್ಮೀರದ ಲಖನ್‌ಪುರದಲ್ಲಿ ಪತನಗೊಂಡಿದೆ. ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಗಂಭೀರ ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇಬ್ಬರು ಪೈಲಟ್‌ಗಳನ್ನು ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳದಿಂದ ಸೇನಾ ಶಿಬಿರದ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿಂದುಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಕಠುವಾ ಜಿಲ್ಲೆಯ ಪೊಲೀಸ್ ಮುಖ್ಯಸ್ಥ ಶೈಲೇಂದ್ರ ಕುಮಾರ್‌ ಮಿಶ್ರಾ ಘಟನೆಯ ಕುರಿತು ಖಚಿತ ಪಡಿಸಿದ್ದಾರೆ.

'ಸೇನೆಯ ಧ್ರುವ್‌ ಹೆಲಿಕಾಪ್ಟರ್‌ ಲಖನ್‌ಪುರ್ ಸಮೀಪ ಪತನವಾಗಿದೆ. ಘಟನೆಯಲ್ಲಿ ಸೇನೆಯ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ. ಪಠಾಣ್‌ಕೋಟ್‌ನ ಸೇನಾ ಶಿಬಿರದ ಆಸ್ಪತ್ರೆಗೆ ಅವರನ್ನು ಕಳುಹಿಸಲಾಗಿದೆ' ಎಂದಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು