ಭಾನುವಾರ, ಸೆಪ್ಟೆಂಬರ್ 26, 2021
27 °C

ಸೇನಾ ಹೆಲಿಕಾಪ್ಟರ್ ಪತನ: ಕಾಣೆಯಾದ ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಪುನರಾರಂಭ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿರುವ ರಂಜಿತ್ ಸಾಗರ್ ಅಣೆಕಟ್ಟು ಸರೋವರಕ್ಕೆ ಅಪ್ಪಳಿಸಿದ ಸೇನಾ ಹೆಲಿಕಾಪ್ಟರ್‌ನಲ್ಲಿದ್ದ ಪೈಲಟ್‌ಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಬುಧವಾರ ಪುನರಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ (ಆ.3) ಬೆಳಗ್ಗೆ ಅಪಘಾತ ಸಂಭವಿಸಿತ್ತು, ರಕ್ಷಣಾ ಕಾರ್ಯಾಚರಣೆಯನ್ನು ರಾತ್ರಿಯಲ್ಲಿ ಸ್ಥಗಿತಗೊಳಿಸಲಾಗಿತ್ತು.

ಪಂಜಾಬ್‌ನ ಪಠಾಣ್‌ಕೋಟ್‌ನಿಂದ 30 ಕಿ.ಮೀ. ದೂರದಲ್ಲಿ ಅಣೆಕಟ್ಟೆಯಿದೆ ಮತ್ತು ಹೆಲಿಕಾಪ್ಟರ್ ಅಪಘಾತಕ್ಕೀಡಾದ ಸರೋವರವನ್ನು ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರ ಸರ್ಕಾರಗಳು ಹಂಚಿಕೊಂಡಿವೆ.

ಅಪಘಾತವಾದ ಸ್ಥಳದ ಆಳವನ್ನು 200 ಅಡಿಗಳಿಗಿಂತ ಹೆಚ್ಚಿದೆ ಎಂದು ಅಂದಾಜಿಸಲಾಗಿದ್ದು, ನೌಕಾಪಡೆಯ ಆಳ ಸಮುದ್ರದ ಮುಳುಗುಗಾರರು ಸಹ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆಗಾಗಿ ಸೇನಾ ಪಡೆಗಳು ಮತ್ತು ದೋಣಿಗಳನ್ನು ಸಜ್ಜುಗೊಳಿಸಿದ ನಂತರ ಮಂಗಳವಾರ ಹೆಲಿಕಾಪ್ಟರ್‌ನ ಕೆಲವು ತುಣುಕುಗಳು ಪತ್ತೆಯಾಗಿವೆ ಎಂದು ಕಥುವಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಆರ್‌.ಸಿ.ಕೊತ್ವಾಲ್ ಹೇಳಿದ್ದಾರೆ.

ಹೆಲಿಕಾಪ್ಟರ್ ಸರೋವರದ ಮೇಲೆ ಹಾರುತ್ತಿದ್ದಾಗ ಇದ್ದಕ್ಕಿದ್ದಂತೆ ಕೆಳಕ್ಕೆ ಬಂದು ನೀರಿಗೆ ಅಪ್ಪಳಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮಂಗಳವಾರದ ಶೋಧ ಕಾರ್ಯಾಚರಣೆಯಲ್ಲಿ ಒಂದು ಹೆಲ್ಮೆಟ್, ಎರಡು ದೊಡ್ಡ ಗಾತ್ರದ ಬ್ಯಾಗ್‌ಗಳು, ಒಂದು ಶೂ, ಐಡಿ ಕಾರ್ಡ್‌ಗಳು ಮತ್ತು ಕೆಲವು ಹೆಲಿಕಾಪ್ಟರ್ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು