ಶನಿವಾರ, ಜನವರಿ 29, 2022
17 °C

ಸಿಡಿಎಸ್ ಬಿಪಿನ್ ರಾವತ್ ಇದ್ದ ಸೇನಾ ಹೆಲಿಕಾಪ್ಟರ್‌ ತಮಿಳುನಾಡಿನ ಕೂನೂರಿನಲ್ಲಿ ಪತನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಚೆನ್ನೈ: ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌ ಹಾಗೂ ಅವರ ಕುಟುಂಬದವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿದೆ ಎಂದು ವರದಿಯಾಗಿದೆ.

ಬುಧವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್‌ ಪತನಗೊಂಡಿರುವುದಾಗಿ ರಕ್ಷಣಾ ಇಲಾಖೆಯ ಅಧಿಕೃತ ಮೂಲಗಳು ತಿಳಿಸಿವೆ.

ಹೆಲಿಕಾಪ್ಟರ್‌ನಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. ಮತ್ತೊಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ನೀಲಗಿರೀಸ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಡಿಎಸ್‌ ಬಿಪಿನ್‌ ರಾವತ್‌ ಇದ್ದ ಭಾರತೀಯ ವಾಯುಪಡೆಯ ‘ಎಂಐ–17ವಿ5’ ಹೆಲಿಕಾಪ್ಟರ್‌ ತಮಿಳುನಾಡಿನ ಕೂನೂರು ಬಳಿ ಅಪಘಾತಕ್ಕೀಡಾಗಿದೆ. ಘಟನೆಗೆ ಕಾರಣವೇನು ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.

ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು