ಮಂಗಳವಾರ, ಏಪ್ರಿಲ್ 20, 2021
29 °C

ಪಾಕಿಸ್ತಾನ ಏಜೆಂಟರಿಗೆ ಗೌಪ್ಯ ಮಾಹಿತಿ ಸೋರಿಕೆ; ಯೋಧನ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ಪಾಕಿಸ್ತಾನದ ಏಜೆಂಟರಿಗೆ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಯೋಧರೊಬ್ಬರನ್ನು ಗುಪ್ತಚರ ಇಲಾಖೆಯು ಬಂಧಿಸಿದೆ.

22 ವರ್ಷದ ಆಕಾಶ್ ಮಹರಿಯಾ ಎಂಬವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಗುಪಚ್ತರ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಕಾಶ್ ರಾಜಸ್ಥಾನದ ಸಿಕಾರ್ ಜಿಲ್ಲೆಯ ನಿವಾಸಿಯಾಗಿದ್ದು, ಸಿಕ್ಕಿಂನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಇದನ್ನೂ ಓದಿ: 

ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಏಟೆಂಟ್‌ಗಳ ಸಂಪರ್ಕಕ್ಕೆ ಬಂದಿರುವ ಯೋಧ, ಗೌಪ್ಯ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದರು ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ.

ಗುಪ್ತಚರ ವಿಭಾಗದ ವಿಚಾರಣೆಯ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೆ ಪ್ರಕರಣ ಸಂಬಂಧ ಸಮಗ್ರ ತನಿಖೆಯನ್ನು ನಡೆಸಲಾಗುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು