ಮಂಗಳವಾರ, ಅಕ್ಟೋಬರ್ 27, 2020
22 °C

ಗುಂಡಿನ ದಾಳಿ: ಯೋಧ ಹುತಾತ್ಮ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಜಮ್ಮು– ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಸೇನಾಪಡೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು ಯೋಧರೊಬ್ಬರು ಹುತಾತ್ಮರಾಗಿದ್ದಾರೆ. 

ಬುಧವಾರ ರಾತ್ರಿ ಮನ್‌ಕೋಟ್‌ ಮತ್ತು ಕೃಷ್ಣ ಘಾಟಿ ವಲಯದಲ್ಲಿ ಈ ದಾಳಿ ನಡೆದಿದೆ. ಪಾಕಿಸ್ತಾನ ಅಪ್ರಚೋದಿತವಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ಮತ್ತೊಬ್ಬ ಯೋಧರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಭಾರತದ ಸೇನಾಪಡೆ ಯೋಧರೂ ತಕ್ಕ ಪ್ರತ್ಯುತ್ತರ ನೀಡಿದರು. ಆದರೆ ಲ್ಯಾನ್ಸ್‌ ನಾಯಕ್‌ ಕರ್ನೈಲ್‌ ಸಿಂಗ್‌  ಹುತಾತ್ಮರಾದರು. ಗಾಯಗೊಂಡ ಮತ್ತೊಬ್ಬ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು