ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ಎನ್‌ಕೌಂಟರ್: ಉಗ್ರರ ಗುಂಡಿಗೆ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆ ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ರಾಜಪೊರಾ ಸಮೀಪದ ಹಂಜಿನಿ ಹಳ್ಳಿಯಲ್ಲಿ ಕಾರ್ಯಾಚರಣೆ ಆರಂಭಿಸಿದವು.
ಅಡಗುತಾಣವನ್ನು ಸುತ್ತವರಿದಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿದ್ದಾರೆ. ಯೋಧರು ಸಹ ಈ ದಾಳಿಗೆ ಪ್ರತ್ಯುತ್ತರ ನೀಡಿದ್ದಾರೆ. ಈ ಘರ್ಷಣೆಯಲ್ಲಿ ತೀವ್ರವಾಗಿ ಗಾಯಗೊಂಡ ಯೋಧರೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.