ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ದೇಶದ ಜನತೆಗೆ ಸಹಾಯ ಮಾಡಲು ಸೇನೆ ಸದಾ ಸಿದ್ಧ –ಬಿಪಿನ್‌ ರಾವತ್‌

Last Updated 24 ಮೇ 2021, 3:00 IST
ಅಕ್ಷರ ಗಾತ್ರ

ಬಲಿಯಾ (ಉತ್ತರ ಪ್ರದೇಶ): ಕೋವಿಡ್‌ನಿಂದಾಗಿ ದೇಶದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು ಈ ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ದೇಶದ ಜನರಿಗೆಅಗತ್ಯ ನೆರವು ನೀಡಲು ಸೇನೆ ಸಿದ್ಧವಿದೆ ಎಂದು ಸೇನಾಪಡೆಗಳ ಮುಖ್ಯಸ್ಥ ಜ. ಬಿಪಿನ್‌ ರಾವತ್‌ ಹೇಳಿದ್ದಾರೆ.

ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಸಾಮಾಜಿಕ ಸಂಘಟನೆಯೊಂದು ಆಯೋಜಿಸಿದ್ದ ವರ್ಚುವಲ್‌ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಯಲು, ಜನರು ಒಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ. ಇದಕ್ಕಾಗಿ ಸೇನೆ ಮೂಲಕ ಅಗತ್ಯ ವೈದ್ಯಕೀಯ ಹಾಗೂ ಮೂಲ ಸೌಕರ್ಯಗಳ ನೆರವು ನೀಡಲಾಗುವುದು ಎಂದು ರಾವತ್‌ ಹೇಳಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ದತ್ತಾಂಶದ ಪ್ರಕಾರ, ಭಾರತದಲ್ಲಿ ಭಾನುವಾರ 2.4 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು ಮತ್ತು 3,741 ಸಾವುಗಳು ದಾಖಲಾಗಿವೆ. ಸೋಂಕಿನಲ್ಲಿ ಇಳಿಕೆ ಕಂಡುಬಂದರೂ ಸಾವಿನ ಪ್ರಮಾಣ ಆತಂಕ ಸೃಷ್ಟಿಸಿದೆ ಎಂದು ಅವರು ಹೇಳಿದರು.

ಭಾರತೀಯ ಸೇನೆ ದೇಶದ ಜನತೆಗೆ ಸಹಾಯ ಮಾಡಲು ಸದಾ ಸಿದ್ಧವಿರುತ್ತದೆ ಎಂದು ರಾವತ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT