ಗುವಾಹಟಿ: ಪದೇ ಪದೇ ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಶೆರ್ಮನ್ ಅಲಿ ಅಹ್ಮದ್ ಅವರನ್ನು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಪಕ್ಷದಿಂದ ಅಮಾನತುಗೊಳಿಸಿದೆ.
ಎಪಿಸಿಸಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ‘ತಕ್ಷಣದಿಂದಲೇ ಈ ಕ್ರಮವನ್ನು ಜಾರಿಗೊಳಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ‘ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಬೊಬ್ಬೀತ್ ಶರ್ಮಾ ಹೇಳಿದ್ದಾರೆ.
ಇತ್ತೀಚೆಗೆ ದರಾಂಗ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶೆರ್ಮನ್ ಅವರನ್ನು ಶನಿವಾರ ಅವರ ನಿವಾಸದಲ್ಲಿ ಬಂಧಿಸಿ, ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.