ಶುಕ್ರವಾರ, ಜೂನ್ 18, 2021
28 °C

ನಾರದ ಹಗರಣ: ಟಿಎಂಸಿ ನಾಯಕರಿಗೆ ಸಿಕ್ಕಿದ್ದ ಜಾಮೀನಿಗೆ ತಡೆ, ಪ್ರೆಸಿಡೆನ್ಸಿ ಜೈಲಿಗೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

PTI Photo

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಾರದ ಹಗರಣದಲ್ಲಿ ಬಂಧಿತರಾಗಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರನ್ನು ಸೋಮವಾರ ರಾತ್ರಿ ಪ್ರೆಸಿಡೆನ್ಸಿ ಜೈಲಿಗೆ ಕರೆದೊಯ್ಯಲಾಗಿದೆ.

ಸೋಮವಾರ ವಿಚಾರಣೆಯ ಬಳಿಕ ಸಿಬಿಐ ವಿಶೇಷ ನ್ಯಾಯಾಲಯ ಬಂಧಿತ ಟಿಎಂಸಿ ನಾಯಕರಿಗೆ ಜಾಮೀನು ನೀಡಿತ್ತು. ಆದರೆ ಈ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನಿಗೆ ಹೈಕೋರ್ಟ್‌ ಕೆಲವೇ ಗಂಟೆಗಳಲ್ಲಿ ತಡೆ ನೀಡಿದೆ. ಜಾಮೀನಿಗೆ ತಡೆ ನೀಡುವಂತೆ ಕೋರಿ ಸಿಬಿಐ ಹೈಕೋರ್ಟ್ ಮೊರೆ ಹೋಗಿತ್ತು.

ಟಿಎಂಸಿ ನಾಯಕರಾದ ಫಿರ್ಹಾದ್ ಹಕೀಂ, ಸುಬ್ರತಾ ಮುಖರ್ಜಿ, ಮದನ್ ಮಿತ್ರಾ ಮತ್ತು ಸೋವನ್ ಚಟರ್ಜಿಯನ್ನು ಪ್ರೆಸಿಡೆನ್ಸಿ ಜೈಲಿಗೆ ಕರೆದೊಯ್ಯಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಯ ಫಲಿತಾಂಶವನ್ನು ಕೇಂದ್ರ ಸರ್ಕಾರ ಮತ್ತು ಅಲ್ಲಿನ ನಾಯಕರು ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ನಮ್ಮ ಮೇಲೆ ಸೇಡು ತೀರಿಸಿಕೊಳ್ಳಲಾಗುತ್ತಿದೆ ಎಂದು ಬಂಧಿತ ಟಿಎಂಸಿ ನಾಯಕ ಮದನ್ ಮಿತ್ರಾ ಹೇಳಿದ್ದಾರೆ.

ನಾರದ ಹಗರಣಕ್ಕೆ ಸಂಬಂ‌ಧಿಸಿ ವಿಚಾರಣೆ ನಡೆಯುತ್ತಿರುವಾಗಲೇ ಸೋಮವಾರ ಸಂಜೆ ಟಿಎಂಸಿ ಬೆಂಬಲಿಗರು ಪಶ್ಚಿಮ ಬಂಗಾಳ ಸಿಬಿಐ ಕಚೇರಿ ಹೊರಗಡೆ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು