ಶುಕ್ರವಾರ, ಮೇ 7, 2021
25 °C
ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಶ್ಲಾಘಿಸಿದ ಕಪಿಲ್ ಸಿಬಲ್

ಪ. ಬಂಗಾಳ ಚುನಾವಣೆ: ದುರಹಂಕಾರ, ಹಣಬಲ, ಒಡೆದಾಳುವ ನೀತಿ ಸೋತಿದೆ –ಕಪಿಲ್ ಸಿಬಲ್

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಗೆಲುವು ಸಾಧಿಸಿರುವುದಕ್ಕೆ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಅಭಿನಂದಿಸಿದ್ದಾರೆ.

‘ಈ ಚುನಾವಣೆಯಲ್ಲಿ ದುರಹಂಕಾರ, ಹಣದ ಬಲ ಮತ್ತು ಜೈ ಶ್ರೀರಾಮ್‌ ಎಂಬ ಘೋಷಣೆಯನ್ನು ರಾಜಕೀಯಕ್ಕೆ ಬಳಸಿಕೊಂಡವರಿಗೆ ಸೋಲಾಗಿದೆ‘ ಎಂದು ಬಿಜೆಪಿಯ ಹೆಸರು ಉಲ್ಲೇಖಿಸಿದೆ ಸಿಬಲ್ ಟ್ವೀಟ್‌ ಮಾಡಿದ್ದಾರೆ.

‘ಪಶ್ಚಿಮ ಬಂಗಾಳದಲ್ಲಿ ಯಾರು ಸೋತರು: ದುರಹಂಕಾರ, ಹಣ ಬಲ, ಜೈ ಶ್ರೀರಾಮ್‌ ಘೋಷಣೆಯನ್ನು ರಾಜಕೀಯಕ್ಕಾಗಿ ಬಳಸಿದ್ದು, ಒಡೆದು ಆಳುವ ಕಾರ್ಯಸೂಚಿ ಮತ್ತು ಚುನಾವಣಾ ಆಯೋಗ‘ ಎಂದು ಸಿಬಲ್‌ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ಆಕೆ ಅವೆಲ್ಲವನ್ನೂ ಎದುರಿಸಿ ಅವರ ವಿರುದ್ಧ ಜಯಗಳಿಸಿದ್ದಾರೆ‘ ಎಂದು ಮಮತಾ ಗೆಲುವನ್ನು ಶ್ಲಾಘಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು