ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಅರುಣ್‌ ಸಿಂಗ್‌

ಸಿ.ಟಿ. ರವಿಗೆ ತಮಿಳುನಾಡು, ಮಹಾರಾಷ್ಟ್ರ, ಗೋವಾ ಹೊಣೆ
Last Updated 13 ನವೆಂಬರ್ 2020, 17:15 IST
ಅಕ್ಷರ ಗಾತ್ರ

ನವದೆಹಲಿ: ಪಕ್ಷದ ಸಂಘಟನಾ ಮುಖ್ಯಸ್ಥರ ಹುದ್ದೆಗಳನ್ನು ಇತ್ತೀಚೆಗಷ್ಟೇ ಬದಲಿಸಿದ್ದ ಬಿಜೆಪಿ, ರಾಜ್ಯಗಳ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ನೇಮಕ ಮಾಡಿ ಶುಕ್ರವಾರ ರಾತ್ರಿ ಆದೇಶ ಹೊರಡಿಸಿದೆ.

ಪಕ್ಷದ ಹಿರಿಯ ಮುಖಂಡ ಅರುಣ ಸಿಂಗ್‌ ಅವರಿಗೆ ಕರ್ನಾಟಕದ ಜವಾಬ್ದಾರಿ ವಹಿಸಲಾಗಿದ್ದು, ಡಿ.ಕೆ. ಅರುಣಾ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚೆಗಷ್ಟೇ ನೇಮಕಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಕ್ಷದ ರಾಜ್ಯ ಮುಖಂಡ ಸಿ.ಟಿ. ರವಿ ಅವರಿಗೆ ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಉಸ್ತುವಾರಿ ವಹಿಸಲಾಗಿದೆ.

ರಾಜ್ಯದ ಇನ್ನೊಬ್ಬ ಮುಖಂಡ ನಿರ್ಮಲಕುಮಾರ್‌ ಸುರಾನಾ ಅವರನ್ನು ನೆರೆಯ ಪುದುಚೇರಿಗೆ ನಿಯೋಜಿಸಲಾಗಿದೆ.

ಇದುವರೆಗೆ ರಾಜ್ಯದ ಉಸ್ತುವಾರಿಯಾಗಿದ್ದ ಪಿ.ಮುರುಳೀಧರ ರಾವ್‌ ಅವರಿಗೆ ಮಧ್ಯಪ್ರದೇಶದ ಹೊಣೆ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT