ಶುಕ್ರವಾರ, ಏಪ್ರಿಲ್ 23, 2021
28 °C

ಅರುಣಾಚಲ ಪ್ರದೇಶವೀಗ ಕೊರೊನಾ ವೈರಸ್‌ ಮುಕ್ತ

ಪಿಟಿಐ Updated:

ಅಕ್ಷರ ಗಾತ್ರ : | |

ಇಟಾನಗರ: ಅರುಣಾಚಲ ಪ್ರದೇಶವು ಭಾನುವಾರ ಕೊರೊನಾ ವೈರಸ್ ಮುಕ್ತವಾಗಿದೆ. ರಾಜ್ಯಲ್ಲಿ ಮೂರು ಸಕ್ರಿಯ ಪ್ರಕರಣಗಳಿದ್ದವು. ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಹಿರಿಯ ಆರೋಗ್ಯಾಧಿಕಾರಿ ಲೋಬ್ಸಂಗ್ ಜಂಪಾ ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 16,836 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 16,780 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಓದಿ: 

ಕಳೆದ 24 ಗಂಟೆಗಳಲ್ಲಿ ಹೊಸ ಕೋವಿಡ್ ಪ್ರಕರಣ ವರದಿಯಾಗಿಲ್ಲ. ಸೋಂಕಿನಿಂದಾಗಿ ಈವರೆಗೆ 56 ಮಂದಿ ಮೃತಪಟ್ಟಿದ್ದಾರೆ. ಅರುಣಾಚಲ ಪ್ರದೇಶದ ಕೋವಿಡ್–19 ಚೇತರಿಕೆ ಪ್ರಮಾಣ ಶೇ 99.66 ಹಾಗೂ ಸೋಂಕು ಪ್ರಕರಣಗಳ ಪ್ರಮಾಣ ಶೂನ್ಯ ಆಗಿದೆ. 4,05,647 ಮಾದರಿಗಳನ್ನು ಈವರೆಗೆ ಪರೀಕ್ಷೆಗೆ ಒಳಪಡಿಸಲಾಗಿದೆ. ಶನಿವಾರ 312 ಮಾದರಿಗಳ ಪರೀಕ್ಷೆ ನಡೆಸಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಮಧ್ಯೆ ರಾಜ್ಯದಲ್ಲಿ 32,325 ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು