ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅರುಪ್‌ ಕುಮಾರ್ ಗೋಸ್ವಾಮಿ ಪ್ರಮಾಣ ವಚನ

Last Updated 6 ಜನವರಿ 2021, 7:33 IST
ಅಕ್ಷರ ಗಾತ್ರ

ಅಮರಾವತಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅರುಪ್‌ ಕುಮಾರ್ ಗೋಸ್ವಾಮಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ವಿಜಯವಾಡದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಿಶ್ವಭೂಷಣ ಹರಿಚಂದನ್‌ ಅವರು, ಅರುಪ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಸಿಕ್ಕಿಂ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಗೋಸ್ವಾಮಿ ಅವರನ್ನು ಆಂಧ್ರ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಯಿತು. ಆಂಧ್ರ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ ಅವರನ್ನು ಸಿಕ್ಕಿಂ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.

ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ, ಮುಖ್ಯ ಕಾರ್ಯದರ್ಶಿ ಆದಿತ್ಯನಾಥ್ ದಾಸ್ ಮತ್ತು ಇತರೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಸಚಿವರು, ಹೈಕೋರ್ಟ್‌ನ ನ್ಯಾಯಮೂರ್ತಿಗಳು, ಕೆಲವು ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT