ಮಂಗಳವಾರ, ಆಗಸ್ಟ್ 16, 2022
29 °C

ಭಗತ್‌, ಅಂಬೇಡ್ಕರ್‌ ಫೋಟೊಗಳನ್ನು ಕಚೇರಿಗಳಲ್ಲಿ ಅಳವಡಿಸಿ: ಬಿಜೆಪಿಗೆ ಕೇಜ್ರಿವಾಲ್‌

ಪಿಟಿಐ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ (ಪಿಟಿಐ)

ನವದೆಹಲಿ: ''ಪಂಜಾಬ್‌ ಮತ್ತು ದೆಹಲಿಯ ವಿಧಾನಸಭೆಯಲ್ಲಿ ರಾಜಕಾರಣಿಗಳ ಬದಲಾಗಿ ಕೇವಲ ಡಾ. ಬಿ.ಆರ್‌. ಅಂಬೇಡ್ಕರ್‌ ಮತ್ತು ಭಗತ್‌ ಸಿಂಗ್‌ ಅವರ ಭಾವಚಿತ್ರಗಳನ್ನು ಅಳವಡಿಸಲು ಎಎಪಿ ಸರ್ಕಾರಗಳು ನಿರ್ಧರಿಸಿವೆ'' ಎಂದು ಆಮ್‌ ಆದ್ಮಿ ಪಕ್ಷದ ಮುಖಂಡ, ದೆಹಲಿ ಸಿಎಂ ಆರವಿಂದ ಕೇಜ್ರಿವಾಲ್‌ ಹೇಳಿದರು.

ದೆಹಲಿ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಕೇಜ್ರಿವಾಲ್‌, ಬಿಜೆಪಿ ಸರ್ಕಾರಗಳಿಗೆ ತಮ್ಮ ಕಚೇರಿಗಳಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಮತ್ತು ಶಹೀದ್‌ ಭಗತ್‌ ಸಿಂಗ್‌ ಅವರ ಭಾವಚಿತ್ರಗಳನ್ನು ಅಳವಡಿಸಿಕೊಳ್ಳುವಂತೆ ಮನವಿ ಮಾಡಿದರು.

''ಭ್ರಷ್ಟಾಚಾರ ಮತ್ತು ತಾರತಮ್ಯದಂತಹ ಕೊಳಕು ರಾಜಕಾರಣವನ್ನು ಎಎಪಿ ಸರ್ಕಾರವು ತೊಲಗಿಸಿದೆ. ಶಿಕ್ಷಣ, ಆರೋಗ್ಯ, ವಿದ್ಯುತ್‌, ನೀರು ಮತ್ತು ರಸ್ತೆಗಳ ಅಭಿವೃದ್ಧಿಯ ಮೂಲಕ ಪ್ರಾಮಾಣಿಕ ಮಾದರಿಯ ರಾಜಕಾರಣವನ್ನು ಪರಿಚಯಿಸಿದೆ'' ಎಂದು ಕೇಜ್ರಿವಾಲ್‌ ಹೇಳಿದರು.

ಭಗತ್‌ ಸಿಂಗ್‌ ಅವರಿಗೆ ಗೌರವ ಸಮರ್ಪಣೆಯ ಭಾಗವಾಗಿ ಪಂಜಾಬ್‌ ಸಿಎಂ ಭಗವಂತ ಮಾನ್‌ ಮತ್ತು ಅವರ ಸಂಪುಟ ಸದಸ್ಯರು ಭಗತ್‌ ಸಿಂಗ್‌ ಅವರ ಜನ್ಮಸ್ಥಳ ಖಾಟ್ಕರ್‌ ಕಲಾನ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು