ಭಾನುವಾರ, ಸೆಪ್ಟೆಂಬರ್ 26, 2021
24 °C

ದೆಹಲಿಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣ: ಕೇಜ್ರಿವಾಲ್‌ ಖಂಡನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಜಧಾನಿಯಲ್ಲಿ ಒಂಬತ್ತು ವರ್ಷದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಖಂಡಿಸಿದ್ದು, ತಪ್ಪಿತಸ್ಥರಿಗೆ ಕಠಿಣಸಜೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಸುಧಾರಿಸುವ ಅಗತ್ಯವಾಗಿದೆ. ಮೃತಳ ಕುಟುಂಬ ಸದಸ್ಯರನ್ನು ಬುಧವಾರ ಭೇಟಿ ಮಾಡಲಿದ್ದು, ಕಾನೂನು ಹೋರಾಟಕ್ಕೆ ಅಗತ್ಯವಿರುವ ಎಲ್ಲ ನೆರವು ನೀಡಲಾಗುವುದು ಎಂದು ಅವರು ಅಭಿಪ್ರಾಯಪಟ್ಟರು.

ಪೊಲೀಸರ ಪ್ರಕಾರ, ಶಂಕಾಸ್ಪದ ರೀತಿಯಲ್ಲಿ ದಲಿತ ಬಾಲಕಿ ಸತ್ತಿದ್ದು, ಅಂತ್ಯಕ್ರಿಯೆಯನ್ನು ಒತ್ತಾಯದಿಂದ ನಡೆಸಲಾಗಿದೆ. ಬಾಲಕಿ ತಾಯಿಯ ಹೇಳಿಕೆಯನ್ನು ಆಧರಿಸಿ ಎಫ್‌ಐಆರ್‌ನಲ್ಲಿ ಅತ್ಯಾಚಾರ ಆರೋಪವನ್ನು ಸೇರಿಸಲಾಗಿದೆ. ಕೃತ್ಯಕ್ಕೆ ಸಂಬಂಧಿಸಿ ಶವಸಂಸ್ಕಾರ ನಡೆಸಿದ ವ್ಯಕ್ತಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು