ಮಂಗಳವಾರ, ಮೇ 24, 2022
26 °C

ಉತ್ತರ ಪ್ರದೇಶದ ರೈತರ ಸಾಲ ಮನ್ನಾ, ಕಬ್ಬು ಬಾಕಿ ಚುಕ್ತಾ: ಕೇಜ್ರಿವಾಲ್

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

Delhi Chief Minister Arvind Kejriwal and Rajya Sabha MP Sanjay Singh wave towards supporters during 'Kejriwal Ki Maharally' in Lucknow. Credit: PTI File Photo

ಲಖನೌ: ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಏರುತ್ತಿದ್ದು, ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ಎಲ್ಲ ರೈತರ ಸಾಲ ಮನ್ನಾ ಮಾಡಲಾಗುವುದು ಮತ್ತು ಹಿಂದಿನ ಸರ್ಕಾರ ಬಾಕಿ ಉಳಿಸಿಕೊಂಡಿರುವ ಕಬ್ಬಿನ ಮೊತ್ತವನ್ನು ಪಾವತಿ ಮಾಡಲಾಗುವುದು ಎಂದು ಆಮ್‌ ಆದ್ಮಿ ಪಾರ್ಟಿ ಹೇಳಿದೆ.

ಈ ಮೊದಲು ಆಮ್‌ ಆದ್ಮಿ ಪಾರ್ಟಿ, ಅಧಿಕಾರಕ್ಕೆ ಬಂದರೆ 300 ಯುನಿಟ್ ಉಚಿತ ವಿದ್ಯುತ್, ಬಾಕಿ ವಿದ್ಯುತ್ ಬಿಲ್ ಮನ್ನಾ, 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳು ತಲಾ ₹1,000, ನಿರುದ್ಯೋಗಿ ಯುವಕರಿಗೆ ₹5,000 ಸಹಾಯಧನ ನೀಡುವುದಾಗಿ ಹೇಳಿತ್ತು.

ಶುಕ್ರವಾರ ಆಮ್ ಆದ್ಮಿ ಪಾರ್ಟಿ ಮೊದಲ ವರ್ಚುವಲ್ ಸಮಾವೇಶ ಆಯೋಜಿಸುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು