ಭಾನುವಾರ, ಜನವರಿ 16, 2022
28 °C

ಸಿಧು ಅವರನ್ನು ಹತ್ತಿಕ್ಕಲು ಅಮರಿಂದರ್, ಚನ್ನಿಯಿಂದ ಯತ್ನ: ಕೇಜ್ರಿವಾಲ್

ಪಿಟಿಐ Updated:

ಅಕ್ಷರ ಗಾತ್ರ : | |

ಅಮೃತಸರ: ‘ಕಾಂಗ್ರೆಸ್‌ನ ಪಂಜಾಬ್ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಸಾರ್ವಜನಿಕರ ಕಲ್ಯಾಣ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದಾರೆ. ಆದರೆ, ಹಿಂದಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಹತ್ತಿಕ್ಕಲು ಯತ್ನಿಸಿದ್ದರು. ಹಾಲಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿಯೂ ಅದನ್ನೇ ಮಾಡುತ್ತಿದ್ದಾರೆ’ ಎಂದು ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

2022ರಲ್ಲಿ ಚುನಾವಣೆ ಎದುರಿಸಲಿರುವ ಪಂಜಾಬ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಕೇಜ್ರಿವಾಲ್, ಕಾಂಗ್ರೆಸ್‌ನ ಕನಿಷ್ಠ 25 ಶಾಸಕರು ಹಾಗೂ 2–3 ಮಂದಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ, ಆ ಪಕ್ಷಕ್ಕೆ ಬೇಡದವರನ್ನು ನಾವು ಸೇರಿಸಿಕೊಳ್ಳಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಓದಿ: 

ಸಿಧು ಅವರ ಧೈರ್ಯಕ್ಕಾಗಿ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಸಿಧು ಯಾವಾಗಲೂ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಪ್ರಸ್ತಾಪಿಸುತ್ತಾರೆ. ಆದರೆ ಅವರನ್ನು ನಿಗ್ರಹಿಸುವ ಯತ್ನ ನಡೆಯುತ್ತಿದೆ ಎಂದಿರುವ ಕೇಜ್ರಿವಾಲ್, ಹಾಲಿ ಮುಖ್ಯಮಂತ್ರಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಉಚಿತ ವಿದ್ಯುತ್, ಮೊಹಲ್ಲಾ ಕ್ಲಿನಿಕ್‌ಗಳ ಸ್ಥಾಪನೆ ಸೇರಿದಂತೆ ಯಾವೊಂದು ಭರವಸೆಗಳನ್ನೂ ಈಡೇರಿಸಲು ಚನ್ನಿ ಮುಂದಾಗಿಲ್ಲ ಎಂದು ಅವರು ದೂರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು