ಭಾನುವಾರ, ಸೆಪ್ಟೆಂಬರ್ 26, 2021
22 °C

ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆದ್ದರೆ ಉಚಿತ ವಿದ್ಯುತ್‌: ಕೇಜ್ರಿವಾಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಗೆದ್ದರೆ, ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಅರವಿಂದ್‌ ಕೇಜ್ರಿವಾಲ್‌ ಅವರು ಸೋಮವಾರ ಭರವಸೆ ನೀಡಿದ್ದಾರೆ.

ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಚಂಡೀಗಡಕ್ಕೆ ಮಂಗಳವಾರ ಭೇಟಿ ನೀಡಲಿದ್ದಾರೆ.

 ‘ನಾವು ದೆಹಲಿಯಲ್ಲಿ ಪ್ರತಿ ಕುಟುಂಬಕ್ಕೆ 200 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುತ್ತೇವೆ. ಇದರಿಂದಾಗಿ ಮಹಿಳೆಯರು ಬಹಳ ಸಂತೋಷವಾಗಿದ್ದಾರೆ. ಆದರೆ ಪಂಜಾಬ್‌ನ ಮಹಿಳೆಯರು ಹಣದುಬ್ಬರದಿಂದಾಗಿ ಬಹಳ ಬೇಸರಗೊಂಡಿದ್ದಾರೆ’ ಎಂದು ಪಂಜಾಬಿ ಭಾಷೆಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಮುಂದಿನ ವರ್ಷ ಫೆಬ್ರುವರಿ ಅಥವಾ ಮಾರ್ಚ್‌ನಲ್ಲಿ ಪಂಜಾಬ್‌ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು