ರೈತರನ್ನು ಬೆಂಬಲಿಸಿ ಕೇಜ್ರಿವಾಲ್ ಒಂದು ದಿನದ ಉಪವಾಸ: ಎಎಪಿ ಕಾರ್ಯಕರ್ತರಿಗೂ ಆಗ್ರಹ

ನವದೆಹಲಿ: ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸುವ ಸಲುವಾಗಿ ಒಂದು ದಿನದ ಉಪವಾಸ ಕೈಗೊಳ್ಳುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.
ರೈತರಿಗೆ ಬೆಂಬಲ ಸೂಚಿಸಿ, ಸೋಮವಾರ ಒಂದು ದಿನದ ಉಪವಾಸ ಮಾಡುವಂತೆ ಎಎಪಿ ಕಾರ್ಯಕರ್ತರು, ಬೆಂಬಲಿಗರು ಹಾಗೂ ಸಾರ್ವಜನಿಕರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗ್ರಹಿಸಿದ್ದಾರೆ.
'ರೈತರು ದೇಶದ್ರೋಹಿಗಳು ಎಂದು ಕೇಂದ್ರ ಸರ್ಕಾರದ ಸಚಿವರು ಹಾಗೂ ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ. ಹಲವು ನಿವೃತ್ತ ಯೋಧರು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಆಟಗಾರರು, ಗಾಯಕರು, ಗಣ್ಯರು, ವೈದ್ಯರು ಹಾಗೂ ವ್ಯಾಪಾರಿಗಳು ರೈತರಿಗೆ ಬೆಂಬಲ ನೀಡಿದ್ದಾರೆ. ಆ ಎಲ್ಲರೂ ದೇಶದ್ರೋಹಿಗಳೇ ಎಂದು ಬಿಜೆಪಿಯನ್ನು ಕೇಳಬೇಕಿದೆ' ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.