ಮಂಗಳವಾರ, ಜನವರಿ 18, 2022
27 °C

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಕೋವಿಡ್‌

ಐಎಎನ್ಎಸ್‌ Updated:

ಅಕ್ಷರ ಗಾತ್ರ : | |

ದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋವಿಡ್‌ ಇರುವುದು ಮಂಗಳವಾರ ದೃಢಪಟ್ಟಿದೆ. ತಮಗೆ ರೋಗ ಲಕ್ಷಣಗಳು ಕಡಿಮೆ ಪ್ರಮಾಣದಲ್ಲಿ ಇರುವುದಾಗಿ ಅವರು ತಿಳಿಸಿದ್ದಾರೆ.

' ನನಗೆ ಕೋವಿಡ್‌ ಇರುವುದು ಪರೀಕ್ಷೆಯಿಂದ ಗೊತ್ತಾಗಿದೆ. ಸೌಮ್ಯ ರೋಗಲಕ್ಷಣಗಳಿವೆ. ನಾನು ಮನೆಯಲ್ಲಿ ಪ್ರತ್ಯೇಕಗೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಪ್ರತ್ಯೇಕವಾಗಿರಿ, ಪರೀಕ್ಷೆ ಮಾಡಿಸಿಕೊಳ್ಳಿ,' ಎಂದು ಟ್ವಿಟರ್‌ನಲ್ಲಿ ಅವರು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಭಾರಿ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದಕ್ಕೆ ಓಮೈಕ್ರಾನ್‌ ಕಾರಣವಿರಬಹುದು ಎಂದು ಹೇಳಲಾಗುತ್ತಿದೆ.

ಸೋಮವಾರ ದೆಹಲಿಯಲ್ಲಿ 4,099 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 2021ರ ಮೇ 18ರ ನಂತರ ನಾಲ್ಕು ಸಾವಿರಕ್ಕೂ ಮಿಗಿಲಾದ ಪ್ರಕರಣಗಳು ವರದಿಯಾಗಿರುವುದು ಇದೇ ಮೊದಲು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು