ಮಂಗಳವಾರ, ಜನವರಿ 25, 2022
25 °C

‘ಓಮಿಕ್ರಾನ್‌’ ಸೋಂಕು ಪ್ರಕರಣ: ವಿಮಾನ ಸಂಚಾರ ಸ್ಥಗಿತಕ್ಕೆ ಕೇಜ್ರಿವಾಲ್‌ ಒತ್ತಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೊರೊನಾ ವೈರಸ್‌ನ ಹೊಸ ರೂಪಾಂತರಿ ತಳಿ ‘ಓಮಿಕ್ರಾನ್‌’ ಸೋಂಕು ಪ್ರಕರಣಗಳು ವರದಿಯಾಗಿರುವ ದೇಶಗಳಿಂದ ಭಾರತಕ್ಕೆ ವಿಮಾನ ಸಂಚಾರ ಸ್ಥಗಿತಗೊಳಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಕೋವಿಡ್‌–19 ಪಿಡುಗಿನಿಂದ ದೇಶ ಬಹಳ ಕಷ್ಟದಿಂದ ಚೇತರಿಸಿಕೊಂಡಿದೆ. ಹೀಗಾಗಿ ಈಗ ವೈರಸ್‌ನ ಹೊಸ ತಳಿ ಸೋಂಕು ಪ್ರಸರಣವಾಗದಂತೆ ತಡೆಯಲು ಸಾಧ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು