ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಮೇ 1ರವರೆಗೂ ರಾತ್ರಿ ಕರ್ಫ್ಯೂ ಜಾರಿ

Last Updated 20 ಏಪ್ರಿಲ್ 2021, 11:35 IST
ಅಕ್ಷರ ಗಾತ್ರ

ಹೈದರಾಬಾದ್‌: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರವು, ರಾಜ್ಯದಾದ್ಯಂತ ಮೇ 1ರವರೆಗೂ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ತೀರ್ಮಾನಿಸಿದೆ.

ಎಲ್ಲ ಕಚೇರಿಗಳು, ಸಂಸ್ಥೆಗಳು, ಮಳಿಗೆಗಳು, ವಾಣಿಜ್ಯ ವಹಿವಾಟುಗಳು, ರೆಸ್ಟೋರೆಂಟ್‌ಗಳು ರಾತ್ರಿ 8ಕ್ಕೆ ಮುಚ್ಚಲಿವೆ. ರಾತ್ರಿ ಕರ್ಫ್ಯೂ 9 ರಿಂದ ಬೆಳಿಗ್ಗೆ 5ಗಂಟೆವರೆಗೂ ಜಾರಿಯಲ್ಲಿರಲಿದೆ.

ಆಸ್ಪತ್ರೆಗಳು, ಡಯಾಗ್ನೊಸ್ಟಿಕ್‌ ಸಂಸ್ಥೆಗಳು, ಔಷಧ ಮಳಿಗೆಗಳು, ಮಾಧ್ಯಮ, ಐ.ಟಿ., ಇ–ಕಾಮರ್ಸ್‌ ಸೇವೆ, ಪೆಟ್ರೋಲ್‌ ಪಂಪ್‌ಗಳು, ಎಲ್‌ಪಿಜಿ, ಸಿಎನ್‌ಜಿ ಮತ್ತು ಅನಿಲ ಮಳಿಗೆಗಳಿಗೆ ಕರ್ಫ್ಯೂವಿನಿಂದ ವಿನಾಯಿತಿ ಇದೆ.

ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿವೆ. 5,926 ಹೊಸ ಪ್ರಕರಣಗಳು ಸೋಮವಾರ ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 42,853ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT