ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಗಳಿಕೆಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಯತ್ನ: ಓವೈಸಿ ಆರೋಪ

Last Updated 30 ಅಕ್ಟೋಬರ್ 2022, 3:45 IST
ಅಕ್ಷರ ಗಾತ್ರ

ಹೈದರಾಬಾದ್: ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಮಿತಿ ರಚಿಸಲು ಅಲ್ಲಿನ ಸರ್ಕಾರ ಮುಂದಾಗಿದೆ. ಇದು ಬಿಜೆಪಿಯ ಮತಗಳಿಕೆಯ ತಂತ್ರ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.

ಹಿಂದುತ್ವ ಅಜೆಂಡಾವನ್ನು ಮುಂದಿಟ್ಟುಕೊಂಡು ಚುನಾವಣೆ ಗೆಲ್ಲಲು ಬಿಜೆಪಿ ಯತ್ನಿಸುತ್ತಿದೆ. ಏಕರೂಪ ನಾಗರಿಕ ಸಂಹಿತೆ ಎನ್ನುವುದು ಐಚ್ಛಿಕವಾಗಿದೆ, ಆದರೆ ಬಿಜೆಪಿ ಅದನ್ನು ಬಲವಂತವಾಗಿ ಜಾರಿ ಮಾಡಲು ಮುಂದಾಗಿದೆ ಎಂದು ಓವೈಸಿ ಹೇಳಿದ್ದಾರೆ.

ಆದಾಯ ತೆರಿಗೆ ಮಿತಿಯ ಪ್ರಯೋಜನಗಳಿಂದ ಮುಸ್ಲಿಮರು ಮತ್ತು ಕ್ರೈಸ್ತರನ್ನು ದೂರವಿರಿಸಲಾಗುತ್ತಿದೆ. ಅದು ಹೇಗೆ ಸಮಾನತೆಯಾಗುತ್ತದೆ? ಅವರಿಗೂ ಏಕರೂಪದ ಕಾನೂನು ಅನ್ವಯವಾಗಬೇಕಲ್ಲವೇ ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಗುಜರಾತ್‌ನಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಿ, ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲು ರಾಜ್ಯ ಸರ್ಕಾರಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT