ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖ್ಯಾತ ವಕೀಲ, ಎಎಸ್‌ಜಿ ರೂಪಿಂದರ್ ಸಿಂಗ್ ಸೂರಿ ನಿಧನ

Last Updated 31 ಜನವರಿ 2022, 7:43 IST
ಅಕ್ಷರ ಗಾತ್ರ

ನವದೆಹಲಿ: ಖ್ಯಾತ ವಕೀಲ ಹಾಗೂ ಸುಪ್ರೀಂ ಕೋರ್ಟ್‌ನ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ರೂಪಿಂದರ್ ಸಿಂಗ್ ಸೂರಿ ಅವರು ಸೋಮವಾರ ಬೆಳಿಗ್ಗೆ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜೂನ್ 2020ರಲ್ಲಿ ಸೂರಿ ಅವರನ್ನು ಎಎಸ್‌ಜಿ ಆಗಿ ನೇಮಿಸಲಾಗಿತ್ತು. ಪತ್ನಿ ಗುರ್ವಿಂದರ್ ಸೂರಿ ಮತ್ತು ಪುತ್ರಿಯರಾದ ಸುರುಚಿ ಹಾಗೂ ಸಿಮರ್ ಅವರನ್ನು ಅಗಲಿದ್ದಾರೆ.

ಸೂರಿ ಅವರು 2009ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ‘ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‘ ​​ಮತ್ತು ‘ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್‌ ಆನ್ ರೆಕಾರ್ಡ್ ಅಸೋಸಿಯೇಷನ್‌‍‍’ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳು ಸೇರಿದಂತೆ ಹಲವು ಗಣ್ಯರು ಸೂರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT