ಗುರುವಾರ , ಮಾರ್ಚ್ 23, 2023
30 °C

ಐಎಎಸ್‌ ಅಧಿಕಾರಿಯಾಗಿದ್ದ ಅಶ್ವಿನಿ ವೈಷ್ಣವ್‌ ರೈಲ್ವೆ ಸಚಿವರಾಗಿ ಅಧಿಕಾರ ಸ್ವೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಆಡಳಿತಾಧಿಕಾರಿ, ಉದ್ಯಮಿಯಾಗಿ ನಂತರ ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಿರುವ ಮಾಜಿ ಐಎಎಸ್‌ ಅಧಿಕಾರಿ ಅಶ್ವಿನಿ ವೈಷ್ಣವ್‌ ಅವರು ನೂತನ ರೈಲ್ವೆ ಸಚಿವರಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು.

ಒಡಿಶಾ ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿರುವ ಅಶ್ವಿನಿ ವೈಷ್ಣವ್‌ ಅವರು ಅಧಿಕಾರವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, '67 ವರ್ಷಗಳಲ್ಲಿ ರೈಲ್ವೆ ಸಚಿವಾಲಯದಲ್ಲಿ ಅತ್ಯುತ್ತಮ ಕಾರ್ಯಗಳು ನಡೆದಿವೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಯೋಜನೆಗಳನ್ನು ಪರಿಪೂರ್ಣಗೊಳಿಸಲು ನಾನು ಪ್ರಯತ್ನಿಸುತ್ತೇನೆ‘ ಎಂದರು.

ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ, ಖರಗ್‌ಪುರ –ಐಐಟಿಯಿಂದ ಎಂ.ಟೆಕ್ ಪದವಿ ಪಡೆದಿರುವ ವೈಷ್ಣವ್ ಅವರು, ಜಾಗತಿಕ ಮಟ್ಟದ ಜನರಲ್ ಎಲೆಕ್ಟ್ರಿಕಲ್ಸ್ ಮತ್ತು ಸೀಮನ್ಸ್‌ ನಂತಹ ಪ್ರಮುಖ ಕಂಪನಿಗಳನ್ನು ಮುನ್ನಡೆಸುವಲ್ಲಿ ಪ್ರಧಾನ ಪಾತ್ರವಹಿಸಿದ್ದರು.

1994ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದ ಅಶ್ವಿನಿ ವೈಷ್ಣವ್‌, ಹದಿನೈದು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಪ್ರಮುಖವಾದ ಜವಾಬ್ದಾರಿಗಳನ್ನು ನಿರ್ವಹಿಸುವ ಜತೆಗೆ, ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವ(ಪಿಪಿಪಿ) ಯೋಜನೆಗೆ ಒಂದು ಉತ್ತಮ ಚೌಕಟ್ಟನ್ನು ರೂಪಿಸಿದ್ದರು. ಈ ಅನುಭವ, ತಾವು ನಿರ್ವಹಿಸುವ ರೈಲ್ವೆ ಕ್ಷೇತ್ರದ ಅಭಿವೃದ್ಧಿಗೆ ಸಹಾಯವಾಗಲಿದೆ.

ರೈಲ್ವೆ ಸಚಿವರಾಗಿರುವ ವೈಷ್ಣವ್ ಅವರಿಗೆ ದೂರಸಂಪರ್ಕ ಮತ್ತು ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಜವಾಬ್ದಾರಿಯನ್ನೂ ವಹಿಸಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು