ಸೋಮವಾರ, ಆಗಸ್ಟ್ 15, 2022
22 °C
ಯುಎನ್‌ಡಿಪಿ ವರದಿಯಲ್ಲಿ ಭಾರತದ ‘ಎಡಿಪಿ‘ ಅಂಶಗಳ ಉಲ್ಲೇಖ

ಭಾರತದ ಸರ್ವಾಂಗೀಣ ಅಭಿವೃದ್ಧಿಯೇ ಎಡಿಪಿ ಗುರಿ: ಪ್ರಧಾನಿ ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಮುದಾಯದ ಪಾಲ್ಗೊಳ್ಳುವಿಕೆ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಯೇ ‘ಮಹಾತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮ’ದ (ಎಡಿಪಿ) ಉದ್ದೇಶವಾಗಿದ್ದು, ಈ ಬದಲಾವಣೆಗಳನ್ನು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್‌ಡಿಪಿ) ಗುರುತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಯುಎನ್‌ಡಿಪಿ, ಭಾರತದ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮಗಳು ಮತ್ತು ಅದರ ಪ್ರಮುಖ ಲಕ್ಷಣಗಳನ್ನು ಎತ್ತಿ ತೋರಿಸಿರುವುದನ್ನು ಉಲ್ಲೇಖಿಸಿ, ಈ ಹೇಳಿಕೆ ನೀಡಿದ್ದಾರೆ.

‌ಯುಎನ್‌ಡಿಪಿ ತನ್ನ ವರದಿಯಲ್ಲಿ, ‘ಜಿಲ್ಲೆಗಳಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ತ್ವರಿತಗೊಳಿಸಲು ಭಾರತದ ಎಡಿಪಿ ಕಾರ್ಯಕ್ರಮ ವೇಗವರ್ಧಕವಾಗಿ ಕಾರ್ಯನಿರ್ವಹಿಸಿದೆ‘ ಎಂದು ಹೇಳಿದೆ. ಈ ಕಾರ್ಯಕ್ರಮದಡಿಯಲ್ಲಿ, ಅನೇಕ ಜಿಲ್ಲೆಗಳು ಸಮಗ್ರ ಪರಿವರ್ತನೆಗೆ ಸಾಕ್ಷಿಯಾಗಿವೆ. 

‘ಎಡಿಪಿ ಕಾರ್ಯಕ್ರಮಗಳಿಂದಾಗಿ, ಆರೋಗ್ಯ ಮತ್ತು ಪೋಷಣೆ, ಶಿಕ್ಷಣ,  ಸ್ವಲ್ಪ ಮಟ್ಟಿಗೆ ಕೃಷಿ ಮತ್ತು ಜಲ ಸಂಪನ್ಮೂಲ ಕ್ಷೇತ್ರಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳಾಗಿವೆ ‘ ಎಂದು ಯುಎನ್‌ಡಿಪಿ ಹೇಳಿದೆ. ‘ಇದು ನಿರ್ಣಾಯಕ ಕ್ಷೇತ್ರಗಳಲ್ಲಿನ ಅಭಿವೃದ್ಧಿಯನ್ನು ಗುರುತಿಸಲು ಉತ್ತೇಜನಕಾರಿಯಾಗಿದೆ‘ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು