ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ಖಂಡಿಸಿ ಬೀದಿ ನಾಟಕ: ಶಿವ ವೇಷಧಾರಿ ಬಂಧನ, ಬಿಡುಗಡೆ

ಬಂಧನಕ್ಕೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಖಂಡನೆ
Last Updated 10 ಜುಲೈ 2022, 11:28 IST
ಅಕ್ಷರ ಗಾತ್ರ

ಗುವಾಹಟಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ನಡೆದ ಬೀದಿ ನಾಟಕದಲ್ಲಿ ಶಿವನ ವೇಷ ಧರಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತಬಿರಿಂಚಿ ಬೊರಾ ಎಂಬುವರನ್ನು ಬಂಧಿಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಶನಿವಾರ ಬೆಲೆ ಏರಿಕೆ ಮತ್ತು ನಿರುದ್ಯೋಗ ವಿಚಾರವಾಗಿ ಬೊರಾ ಮತ್ತಿತರರು ಬೀದಿ ನಾಟಕ ಪ್ರದರ್ಶಿಸಿದ್ದರು. ನಾಟಕದಲ್ಲಿ, ಮೋಟಾರ್‌ ಬೈಕ್‌ನಲ್ಲಿ ಪೆಟ್ರೋಲ್‌ ಖಾಲಿಯಾದಾಗ ಶಿವ ವೇಷಧಾರಿ ವ್ಯಕ್ತಿ, ಪಾರ್ವತಿ ದೇವಿ ಪಾತ್ರಧಾರಿಯೊಂದಿಗೆ ಜಗಳವಾಡುವ ಸನ್ನಿವೇಶ ಇತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಂಧನವನ್ನು ಖಂಡಿಸಿ ಟ್ವೀಟ್‌ ಮಾಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ, ಪ್ರಚಲಿತ ಸಮಸ್ಯೆಗಳ ಬಗ್ಗೆ ಬೀದಿ ನಾಟಕ ಪ್ರದರ್ಶಿಸುವುದು ಧರ್ಮ ನಿಂದನೆಯಲ್ಲ. ಹೀಗಾಗಿ ಬಂಧಿತ ಕಾರ್ಯಕರ್ತರನ್ನು ಬಿಡುಗಡೆ ಮಾಡಲು ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಈ ಬೆನ್ನಲ್ಲೇ ಜಾಮೀನು ಆಧಾರದಲ್ಲಿ ಬೊರಾ ಅವರನ್ನು ಬಿಡುಗಡೆ ಮಾಡಲಾಯಿತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಗಾಂವ್ ಪೊಲೀಸ್‌ ವರಿಷ್ಠಾಧಿಕಾರಿ ಲೀನಾ ಡೊಲಿ ಅವರು, ‘ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗ ದಳದ ದೂರಿನನ್ವಯ, ಧಾರ್ಮಿಕ ಭಾವನೆಗೆ ಧಕ್ಕೆ, ಮಹಿಳೆಯೊಂದಿಗೆ ಅಗೌರವಯುತವಾಗಿ ನಡೆದುಕೊಂಡಿರುವುದು ಮತ್ತು ನಾಟಕದ ವೇಳೆ ಹೆಲ್ಮೆಟ್ ಧರಿಸದಿರುವ ಆರೋಪ ಸಂಬಂಧಕಾರ್ಯಕರ್ತ ಬಿರಿಂಚಿ ಬೊರಾ ಅವರನ್ನು ಶನಿವಾರ ಬಂಧಿಸಲಾಗಿತ್ತು. ಭಾನುವಾರ ಬೆಳಿಗ್ಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT