ಭಾನುವಾರ, ಜೂನ್ 20, 2021
28 °C

ಪಶ್ಚಿಮ ಬಂಗಾಳ, ಅಸ್ಸಾಂ ವಿಧಾನಸಭಾ ಚುನಾವಣೆ: ಮೊದಲ ಹಂತದ ಮತದಾನ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಶನಿವಾರ (ಮಾ. 27) ನಡೆಯಲಿದೆ. ಪಶ್ಚಿಮ ಬಂಗಾಳದ 30 ಹಾಗೂ ಅಸ್ಸಾಂನ 47 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ನಡೆಯುವ 30 ಕ್ಷೇತ್ರಗಳ ಪೈಕಿ 27ರಲ್ಲಿ ಪ್ರಸಕ್ತ ಟಿಎಂಸಿ ಶಾಸಕರು ಇದ್ದಾರೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಇನ್ನೊಂದು ಕ್ಷೇತ್ರದಲ್ಲಿ ಆರ್‌ಎಸ್‌ಪಿ ಶಾಸಕರಿದ್ದಾರೆ. 2019ರಲ್ಲಿ ಈ ಕ್ಷೇತ್ರಗಳ ಚಿತ್ರಣ ಬದಲಾಗಿದ್ದು, ಈ ಭಾಗದ ಎಲ್ಲಾ ಐದು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು  ಸಾಧಿಸಿತ್ತು. ಈ ಬಾರಿ ತಲಾ 29 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಟಿಎಂಸಿಯ ಅಭ್ಯರ್ಥಿಗಳಿದ್ದಾರೆ. ಎಡಪಕ್ಷಗಳು, ಕಾಂಗ್ರೆಸ್‌ ಹಾಗೂ ಐಎಸ್‌ಎಫ್‌ ಮೈತ್ರಿಕೂಟವು 30 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು