ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ–ಅರುಣಾಚಲ ಪ್ರದೇಶ ಗಡಿ ವಿವಾದ 2023ರ ವೇಳೆಗೆ ಬಗೆಹರಿಯುವ ನಿರೀಕ್ಷೆ: ಶಾ

Last Updated 21 ಮೇ 2022, 13:15 IST
ಅಕ್ಷರ ಗಾತ್ರ

ದೇವಮಾಲಿ, ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ನಡುವಿನ ಅಂತರರಾಜ್ಯ ಗಡಿ ವಿವಾದವು 2023 ರ ಮೊದಲೇ ಬಗೆಹರಿಯುವ ನಿರೀಕ್ಷೆ ಇದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.

ಅರುಣಾಚಲ ಪ್ರದೇಶದ ತಿರಾಪ್ ಜಿಲ್ಲೆಯ ನರೋತ್ತಮ್ ನಗರದಲ್ಲಿರುವ ರಾಮಕೃಷ್ಣ ಮಿಷನ್ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಅಸ್ಸಾಂ ಮತ್ತು ಮೇಘಾಲಯ ನಡುವಿನ ಅಂತರರಾಜ್ಯ ಗಡಿ ವಿವಾದವನ್ನು ಶೇ 60 ರಷ್ಟು ಸೌಹಾರ್ದಯುತವಾಗಿ ಬಗೆಹರಿಸಲಾಗಿದೆ. ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ನಡುವಿನ ವಿವಾದವು ಸಹ 2023ರ ಮೊದಲು ಇತ್ಯರ್ಥವಾಗಲಿದೆ ಎಂಬ ವಿಶ್ವಾಸವಿದೆ’ ಎಂದು ಹೇಳಿದರು.

‘ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಸ್ಥಾಪನೆಗೆ ಮತ್ತು ಅಭಿವೃದ್ಧಿಗೆ ಕೇಂದ್ರವು ಬದ್ಧವಾಗಿದೆ. ಇಲ್ಲಿನ ಯುವಕರು ಇನ್ನು ಮುಂದೆ ಬಂದೂಕು ಮತ್ತು ಪೆಟ್ರೋಲ್ ಬಾಂಬ್‌ಗಳಿಂದ ದೂರವಿರಲಿದ್ದಾರೆ. ಅವರು ಈಗ ಲ್ಯಾಪ್‌ಟಾಪ್‌ಗಳನ್ನು ಹೊತ್ತುಕೊಂಡು ಸ್ಟಾರ್ಟ್‌ಅಪ್‌ಗಳನ್ನು ಪ್ರಾರಂಭಿಸುತ್ತಿದ್ದಾರೆ. ಈ ಪ್ರದೇಶಕ್ಕೆ ಕೇಂದ್ರವು ಅಭಿವೃದ್ಧಿಯ ಹಾದಿಯನ್ನು ಕಲ್ಪಿಸಿದೆ. ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಈ ಪ್ರದೇಶದಿಂದ 9,000 ಉಗ್ರಗಾಮಿಗಳು ಶರಣಾಗಿದ್ದಾರೆ’ ಎಂದು ಶಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT