ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ, ಬಿಹಾರದಲ್ಲಿ ಮಳೆ: ಸತ್ತವರ ಸಂಖ್ಯೆ 50ಕ್ಕೆ ಏರಿಕೆ

Last Updated 22 ಮೇ 2022, 13:22 IST
ಅಕ್ಷರ ಗಾತ್ರ

ಗುವಾಹಟಿ/ಪಟ್ನಾ (ಪಿಟಿಐ): ಅಸ್ಸಾಂ ಹಾಗೂ ಬಿಹಾರ ರಾಜ್ಯದಲ್ಲಿಭೀಕರ ಚಂಡಮಾರುತ ಹಾಗೂ ಮಳೆಯ ಪರಿಣಾಮ ಪ್ರವಾಹದಿಂದ ಪರಿಸ್ಥಿತಿ ಹದಗೆಟ್ಟಿದ್ದು, ಎರಡು ರಾಜ್ಯಗಳಲ್ಲಿ 50ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸುಮಾರು 10 ಲಕ್ಷ ಜನ ತೊಂದರೆಗೆ ಒಳಗಾಗಿದ್ದಾರೆ.

ಅಸ್ಸಾಂನಲ್ಲಿ ಪ್ರವಾಹ ಸಂಕಷ್ಟಕ್ಕೆ ಸಿಲುಕಿರುವವರ ಸಂಖ್ಯೆ 8 ಲಕ್ಷಕ್ಕೆ ಏರಿಕೆಯಾಗಿದೆ. 15ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಅಸ್ಸಾಂ ಪೊಲೀಸರು ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 1,413 ಗ್ರಾಮಗಳು ಜಲಾವೃತವಾಗಿವೆ. ನಾಗಾಂವ್‌ ಜಿಲ್ಲೆ ಅತಿ ಹೆಚ್ಚು ಹಾನಿಗೊಳಗಾಗಿದ್ದು, ಇಲ್ಲಿನ 2.88 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರವಾಹದಿಂದ ರಾಜ್ಯದಲ್ಲಿ 46,160 ಹೆಕ್ಟೇರ್ ಬೆಳೆ ಪ್ರದೇಶ ಮುಳುಗಡೆಯಾಗಿದೆ. ಹಲವೆಡೆ ಭೂ ಕುಸಿತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ರಾಜ್ಯದ 14 ಜಿಲ್ಲೆಗಳಲ್ಲಿ 248 ಪರಿಹಾರ ಶಿಬಿರಗಳನ್ನು ನಡೆಸಲಾಗುತ್ತಿದ್ದು, ಅಲ್ಲಿ 6,911 ಮಕ್ಕಳು ಸೇರಿದಂತೆ 48,304 ಜನರು ಆಶ್ರಯ ಪಡೆದಿದ್ದಾರೆ.

ಬಿಹಾರದಲ್ಲಿ ಉಂಟಾಗಿರುವ ಭೀಕರ ಚಂಡಮಾರುತ ಹಾಗೂ ಮಳೆಗೆ 38 ಮಂದಿ ಬಲಿಯಾಗಿದ್ದಾರೆ. ಇಲ್ಲಿನ ವಿವಿಧ ಜಿಲ್ಲೆಗಳಲ್ಲಿ ಚಂಡಮಾರುತದಿಂದ ಸಾಕಷ್ಟು ಹಾನಿಯಾಗಿದ್ದು 2 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೆ ಒಳಗಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮೃತಪಟ್ಟವರಿಗೆಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT