ಮಂಗಳವಾರ, ಸೆಪ್ಟೆಂಬರ್ 28, 2021
21 °C

ಅಸ್ಸಾಂ: ಗಡಿ ಹಿಂಸಾಚಾರದಲ್ಲಿ ಪೊಲೀಸರ ಸಾವು– ಮೂರು ದಿನ ಶೋಕಾಚರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗುವಾಹಟಿ: ಮಿಜೋರಾಂನೊಂದಿಗಿನ ಗಡಿ ಸಂಘರ್ಷದಲ್ಲಿ ಅಸ್ಸಾಂನ ಐವರು ಪೊಲೀಸ್‌ ಸಿಬ್ಬಂದಿ ಮತ್ತು  ನಾಗರಿಕರೊಬ್ಬರು ಮೃತಪಟ್ಟಿದ್ದು, ಇವರ ಗೌರವಾರ್ಥ ಅಸ್ಸಾಂ ಸರ್ಕಾರವು ಮಂಗಳವಾರದಿಂದ ಮೂರು ದಿನಗಳವರೆಗೆ ಶೋಕಾಚರಣೆ ಘೋಷಿಸಿದೆ.

ಈ ಅವಧಿಯಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು. ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಸ್ಸಾಂ–ಮಿಜೋರಾಂ ಗಡಿ ಹಿಂಸಾಚಾರದಲ್ಲಿ ಅಸ್ಸಾಂನ ಆರು ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಅಸ್ಸಾಂ ಮುಖ್ಯಮಂತ್ರಿ  ಹಿಮಂತ ಬಿಸ್ವಾ ಶರ್ಮಾ ಅವರು ಹುತಾತ್ಮ ಪೊಲೀಸ್‌ ಸಿಬ್ಬಂದಿಗೆ ಪುಷ್ಪನಮನ ಸಲ್ಲಿಸಿದರು.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು